ಕರ್ನಾಟಕ ಪಬ್ಲಿಕ್ ಶಾಲೆಗೆ ಸಂಸದ ಭೇಟಿ

 ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಗೆ ಸಂಸದ ಸುನೀಲ್ ಬೋಸ್ ಭೇಟಿ ನೀಡಿ ಪರಿಶೀಲಿಸಿದರು.
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಗೆ ಸಂಸದ ಸುನೀಲ್ ಬೋಸ್ ಭೇಟಿ ನೀಡಿ ಪರಿಶೀಲಿಸಿದರು.
Published on
ಯಳಂದೂರು: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸಂಸದ ಸುನೀಲ್ ಬೋಸ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಶಾಲೆಯ ಕಟ್ಟಡ ಶಿಥಿಲವಾಗಿದ್ದು ದುರಸ್ತಿಗೊಳಿಸಲು ಕ್ರಮವಹಿಸುವಂತೆ ಮನವಿ ಪತ್ರ ಸಲ್ಲಿಸಿದರು. ಈ ಬಗ್ಗೆ ಕ್ರಮ ವಹಿಸುವ ಭರವಸೆಯನ್ನು ಸಂಸದರು ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಜೈಗುರು, ವಜ್ರಮುನಿ, ಮರಿಸ್ವಾಮಿ, ಮುಡಿಗುಂಡ ಶಾಂತರಾಜು, ಮಹೇಶ್, ವೆಂಕಟೇಶ್ ಇದ್ದರು.
ಇದಕ್ಕೂ ಮುನ್ನ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯ ವಾರ್‌ರೂಂನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಜಿಲ್ಲೆಯಲ್ಲಿ ಈವರೆಗೆ ಶೇ.76 ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಶೇ.77 ಪ್ರಕ್ರಿಯೆ ಮುಗಿದಿದ್ದು ನಾವು ರಾಜ್ಯದಲ್ಲೇ ಮುಂದಿದ್ದೇವೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net