ಏತ ನೀರಾವರಿ ಯೋಜನೆ ರೂಪಿಸಲು ಅಗತ್ಯ ಕ್ರಮ

 ಹನೂರು ತಾಲೂಕಿನ ದಂಟಳ್ಳಿ ಸಮೀಪದ ಕಾವೇರಿ ನದಿ ತೀರಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು. ಶೈಲೇಂದ್ರ, ಅರ್ಪುದರಾಜ್, ಲೂರ್ದುಸ್ವಾಮಿ, ರಾಜಶೇಖರಮರ್ತಿ, ಇತರರಿದ್ದರು.
ಹನೂರು ತಾಲೂಕಿನ ದಂಟಳ್ಳಿ ಸಮೀಪದ ಕಾವೇರಿ ನದಿ ತೀರಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು. ಶೈಲೇಂದ್ರ, ಅರ್ಪುದರಾಜ್, ಲೂರ್ದುಸ್ವಾಮಿ, ರಾಜಶೇಖರಮರ್ತಿ, ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಶಾಸಕ ಆರ್.ನರೇಂದ್ರ ಭರವಸೆ
  • ದಂಟಳ್ಳಿ ಸಮೀಪದ ಕಾವೇರಿ ನದಿ ದಡ ಪರಿಶೀಲನೆ
ಹನೂರು: ಏತ ನೀರಾವರಿ ಯೋಜನೆಯನ್ನು ರೂಪಿಸುವ ಬಗ್ಗೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮವಹಿಸಲಾಗುವುದು ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.
ಏತ ನೀರಾವರಿ ಯೋಜನೆಯನ್ನು ರೂಪಿಸುವ ಸಂಬಂಧ ತಾಲೂಕಿನ ವಡಕೆಹಳ್ಳದಲ್ಲಿ ಕಳೆದ 109 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರ ಜತೆಗೂಡಿ ಬುಧವಾರ ದಂಟಳ್ಳಿ ಸಮೀಪದ ಕಾವೇರಿ ನದಿ ದಡಕ್ಕೆ ತೆರಳಿ ಪರಿಶೀಲಿಸಿ ಮಾತನಾಡಿದರು.
ಹನೂರು ಭಾಗದಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಈ ದೆಸೆಯಲ್ಲಿ ಮಾರ್ಟಳ್ಳಿ, ಕುರಟ್ಟಿ ಹೊಸೂರು ಹಾಗೂ ಶೆಟ್ಟಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ದಂಟಳ್ಳಿ ಸಮೀಪದ ಕಾವೇರಿ ನದಿಯಿಂದ ಏತ ನೀರಾವರಿ ಯೋಜನೆಯನ್ನು ರೂಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೀರಾ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ಯೋಜನೆ ರೂಪಿಸುವಂತೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ, ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ಕೊಳ್ಳೇಗಾಲ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ಕಾರ್ಯದರ್ಶಿ ರಾಜಶೇಖರಮೂರ್ತಿ, ರೈತ ಮುಖಂಡರಾದ ಲೂರ್ದುಸ್ವಾಮಿ, ಪೀಟರ್, ಡೇವಿಡ್, ಪೊನ್ನಾಚಿ ರವಿ ಇನ್ನಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net