ಬಂಡೀಪುರದಲ್ಲಿ ಸುರಂಗಮಾರ್ಗ ನಿರ್ಮಾಣ ಬೇಡ

ಬಂಡೀಪುರದಲ್ಲಿ ಸುರಂಗಮಾರ್ಗಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಸದಸ್ಯರು ಕಂದಾಯಾದಿಕಾರಿಗಳಿಗೆ ಮನವಿ ಸಲ್ಲಿಸಿದರು. ಈಶ್ವರ, ಪುಟ್ಟಮ್ಮ ಇದ್ದರು.
ಬಂಡೀಪುರದಲ್ಲಿ ಸುರಂಗಮಾರ್ಗಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಸದಸ್ಯರು ಕಂದಾಯಾದಿಕಾರಿಗಳಿಗೆ ಮನವಿ ಸಲ್ಲಿಸಿದರು. ಈಶ್ವರ, ಪುಟ್ಟಮ್ಮ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Bandipur
  • no-tunnel
ಗುಂಡ್ಲುಪೇಟೆ: ಬಂಡೀಪುರದಲ್ಲಿ ಸುರಂಗಮಾರ್ಗ ನಿರ್ಮಾಣಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಕಂದಾಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಎಸ್ ಈಶ್ವರ ನೇತೃತ್ವದಲ್ಲಿ ತಾಲೂಕು ಕಚೇರಿಯಲ್ಲಿ ಕಂದಾಯಾಧಿಕಾರಿಗಳನ್ನು ಭೇಟಿ ಮಾಡಿ, ಸುರಂಗ ಮಾರ್ಗ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಿದ್ದು, ಇದರಿಂದ ಪ್ರಕೃತಿ ವಿಕೋಪ ಹಾಗೂ ಅಕ್ರಮ ದಂಧೆಗಳು ಮತ್ತಷ್ಟು ಹೆಚ್ಚಾಗುವುದಲ್ಲದೆ, ಈಗಾಗಲೇ ಗಾಂಜಾ, ಜಾನುವಾರು, ಪಡಿತರ ಅಕ್ಕಿ, ಕಲ್ಲು-ಮಣ್ಣು, ಎಂ-ಸ್ಯಾಂಡ್, ಎಗ್ಗಿಲ್ಲದೆ ಹೊರ ರಾಜ್ಯಕ್ಕೆ ಹೋಗುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಸುರಂಗ ಮಾರ್ಗ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಒತ್ತಾಯದ ಮನವಿಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷೆ ಎಸ್ ಪುಟ್ಟಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್, ರಾಜಪ್ಪ, ರೇಖಾ, ಭಾಸ್ಕರ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net