ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಕಿಡಿ

ವಿಪಕ್ಷ ನಾಯಕ ಆರ್.ಅಶೋಕ್ ಅವರು ಫೇಸ್‌ಬುಕ್ ಖಾತೆಯಲ್ಲಿ ಸರ್ಕಾರದ ವೈಫಲ್ಯವನ್ನು ಹಂಚಿಕೊಂಡಿರುವುದು.
ವಿಪಕ್ಷ ನಾಯಕ ಆರ್.ಅಶೋಕ್ ಅವರು ಫೇಸ್‌ಬುಕ್ ಖಾತೆಯಲ್ಲಿ ಸರ್ಕಾರದ ವೈಫಲ್ಯವನ್ನು ಹಂಚಿಕೊಂಡಿರುವುದು.
Published on
ಹನೂರು: ನಾಗಮಲೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿಗೆ ಬಾಲಕ ಬಲಿಯಾದ ಹಿನ್ನೆಲೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಫೇಸ್‌ಬುಕ್ ಖಾತೆಯಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಾದಪ್ಪನ ಭಕ್ತರಿಗೆ ಭದ್ರತೆ ನೀಡಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೆಲ ದಿನಗಳ ಅಂತರದಲ್ಲಿ 3 ಚಿರತೆ ದಾಳಿಗಳು, 2 ಅಮಾಯಕ ಭಕ್ತರ ಸಾವು. ಇದು ಆಡಳಿತ ವೈಫಲ್ಯ ಅಲ್ಲವೇ? ಸರ್ಕಾರದ ಘೋರ ನಿರ್ಲಕ್ಷ್ಯ ಅಲ್ಲವೇ? ದೇವಸ್ಥಾನದ ಹೆಸರಿನಲ್ಲಿ ಕೋಟಿ ಕೋಟಿ ರೂ. ಸಂಗ್ರಹ ಮಾಡುವ ಸರ್ಕಾರಕ್ಕೆ, ಭಕ್ತರ ಸುರಕ್ಷತೆಯ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದಿರುವುದು ಅತ್ಯಂತ ದುಃಖಕರ ಹಾಗೂ ಖಂಡನೀಯ. ಪ್ರತಿ ವಾಹನದಿಂದ ನೂರಾರು ರೂ. ಪ್ರವೇಶ ಶುಲ್ಕ ವಸೂಲಿ ಮಾಡುವ ಸರ್ಕಾರಕ್ಕೆ ಭಕ್ತರಿಗೆ ಸೂಕ್ತ ಭದ್ರತೆ ಒದಗಿಸಲು ಆಗದಿರುವುದು ವಿಪರ್ಯಾಸವೇ ಸರಿ.
ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಏನು ಮಾಡುತ್ತಿದೆ? ಭಕ್ತರ ಜೀವಕ್ಕಿಂತ ಹಣದ ಸಂಗ್ರಹವೇ ಮುಖ್ಯವಾಗಿದೆಯೇ? ಕಾಡು ಪ್ರಾಣಿಗಳ ದಾಳಿ ಹೆಚ್ಚಾಗುತ್ತಿದ್ದರೂ ಭದ್ರತಾ ಕ್ರಮ ಇಲ್ಲ. ನಿಯಂತ್ರಣ ಇಲ್ಲ. ತುರ್ತು ವೈದ್ಯಕೀಯ ಸೌಲಭ್ಯಗಳಿಲ್ಲ. ಜನರ ಕಾಳಜಿ ಎಂಬುದೇ ಮರೀಚಿಕೆ. ಭಕ್ತರು ದೇವರ ದರ್ಶನಕ್ಕೆ ತಮ್ಮ ಜೀವವನ್ನು ಪಣಕ್ಕಿಟ್ಟು ಹೋಗುವ ಪರಿಸ್ಥಿತಿ ಮಾಡಿರುವ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಭಕ್ತರ ಸುರಕ್ಷತೆಗೆ ಶಾಶ್ವತ ಮತ್ತು ಕಠಿಣ ಕ್ರಮಗಳನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net