ಜಿಲ್ಲಾ ಕಾರ್ಮಿಕ ಇಲಾಖೆ ಮತ್ತು ಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ 2025-26ನೇ ಸಾಲಿನಲ್ಲಿ ಒಟ್ಟು 454 ಕಡೆ ತಪಾಸಣೆ ನಡೆಸಿದೆ. ಈ ವೇಳೆ ಚಾಮರಾಜನಗರ ತಾಲೂಕಿನಲ್ಲಿ 9, ಕೊಳ್ಳೇಗಾಲ ತಾಲೂಕಿನಲ್ಲಿ 5, ಗುಂಡ್ಲುಪೇಟೆ ತಾಲೂಕಿನಲ್ಲಿ 11 ಸೇರಿ ಒಟ್ಟು 25 ಬಾಲ ಮತ್ತು ಕಿಶೋರ ಕಾರ್ಮಿಕರು ಪತ್ತೆಯಾಗಿದ್ದಾರೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳ ಗಡಿಯಲ್ಲಿರುವ ಗುಂಡ್ಲುಪೇಟೆಯಲ್ಲಿ ಕಲ್ಲು ಗಣಿಗಾರಿಕೆ, ಕ್ರಷರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಅಲ್ಲದೇ ವಾಣಿಜ್ಯ ಕೇಂದ್ರವಾಗಿಯೂ ಗುಂಡ್ಲುಪೇಟೆ ಉತ್ತಮ ಮಾರುಕಟ್ಟೆಯನ್ನು ಹೊಂದಿದೆ. ಹಾಗಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ನಡೆಸಿರುವ ತಪಾಸಣೆ ವೇಳೆಯಲ್ಲೇ ಗುಂಡ್ಲುಪೇಟೆಯಲ್ಲಿ 11 ಕಿಶೋರ ಕಾರ್ಮಿಕರು ಪತ್ತೆಯಾಗಿದ್ದಾರೆ.