ಮೋಟಾರ್ ಅಳವಡಿಕೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ

 ಹನೂರು ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆಯಾಗುವ ಹರಳೆ ಪಂಪ್‌ಹೌಸ್‌ನಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಪಪಂ ಮಾಜಿ ಸದಸ್ಯರು ಪರಿಶೀಲಿಸಿದರು. ಹರೀಶ್, ಬಸವರಾಜು, ಗಿರೀಶ್, ಸುದೇಶ್ ಇದ್ದರು.
ಹನೂರು ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆಯಾಗುವ ಹರಳೆ ಪಂಪ್‌ಹೌಸ್‌ನಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಪಪಂ ಮಾಜಿ ಸದಸ್ಯರು ಪರಿಶೀಲಿಸಿದರು. ಹರೀಶ್, ಬಸವರಾಜು, ಗಿರೀಶ್, ಸುದೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹರಳೆ, ಸಿದ್ದಯ್ಯನಪುರ ಪಂಪ್‌ಹೌಸ್‌ಗೆ ಹನೂರು ಪಪಂ ಮಾಜಿ ಸದಸ್ಯರ ಭೇಟಿ
ಹನೂರು: ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆಯಾಗುವ ಕೊಳ್ಳೇಗಾಲ ತಾಲೂಕಿನ ಹರಳೆ ಹಾಗೂ ಸಿದ್ದಯ್ಯನಪುರ ಪಂಪ್‌ಹೌಸ್‌ಗೆ ಮಂಗಳವಾರ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರು ಭೇಟಿ ನೀಡಿ ಮಂದಗತಿ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದರು.
ಪಪಂ ಮಾಜಿ ಉಪಾಧ್ಯಕ್ಷ ಗಿರೀಶ್ ಮಾತನಾಡಿ, ಪಂಪ್‌ಹೌಸ್‌ನಲ್ಲಿ ಮೋಟಾರ್ ಅಳವಡಿಕೆ ಸೇರಿದಂತೆ ಇನ್ನಿತರ ಕೆಲ ಕಾಮಗಾರಿ ಕೈಗೊಂಡು 15 ದಿನ ಕಳೆದಿವೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದ್ದು, ಜನರು ಬವಣೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸೆ.2ರೊಳಗೆ ಕಾಮಗಾರಿ ಪೂರ್ಣಗೊಳ್ಳುವುದಾಗಿ ಅಧಿಕಾರಿಗಳು ಹಾಗೂ ಶಾಸಕರಿಂದ ತಿಳಿದು ಬಂದಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಮುತುವರ್ಜಿ ವಹಿಸದ ಪರಿಣಾಮ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ ತೀವ್ರವಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಕಾಳಜಿ ವಹಿಸಿ ಇನ್ನೇರೆಡು ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಿ ಪಟ್ಟಣಕ್ಕೆ ನೀರು ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ಸಾರ್ವಜನಿಕರ ಜತೆಗೂಡಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾಜಿ ಉಪಾಧ್ಯಕ್ಷರಾದ ಹರೀಶ್, ಬಸವರಾಜು ಹಾಗೂ ಮಾಜಿ ಸದಸ್ಯ ಸುದೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net