ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

accident
accident
Published on
ಕೊಳ್ಳೇಗಾಲ: ತಾಲೂಕಿನ ಹಂಪಾಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಸುಕಿನಲ್ಲಿ ಪಾದಚಾರಿಯೊಬ್ಬನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಾಲೂಕಿನ ಮಧುವನಹಳ್ಳಿ ಗ್ರಾಮದ ಗುರುಸಿದ್ದಶೆಟ್ಟಿ (70 ) ಮೃತರು. ಇವರು ಬೈಪಾಸ್ ರಸ್ತೆಯಲ್ಲಿ ಬಸವನಪುರಕ್ಕೆ ಹೋಗುತ್ತಿದ್ದ ವೇಳೆ ಯಾವುದೋ ವಾಹನ ಹಂಪಾಪುರ ಬಳಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ತನಿಖೆ ಕೈಗೊಂಡು, ಅಪಘಾತ ಎಸಗಿದ ವಾಹನ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಕೊಳ್ಳೇಗಾಲ ಉಪವಿಭಾಗ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net