ಗ್ರಾಮದಲ್ಲಿ ಬಡ ಕುಟುಂಬದ ಜನರು ಹೆಚ್ಚಾಗಿ ವಾಸಿಸುತ್ತಿದ್ದು, ಕೂಲಿಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಆದರೆ ಗ್ರಾಮದಲ್ಲಿ ಒಂದು ತಿಂಗಳಿನಿಂದಲೂ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರೂ ಗ್ರಾಪಂ ಆಡಳಿತ ಸಮರ್ಪಕ ನೀರು ಪೂರೈಕೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿತ್ತು. ಪರಿಣಾಮ ಕಳೆದ 3 ದಿನಗಳಿಂದ ನೀರಿನ ಸಮಸ್ಯೆ ತಾರಕಕ್ಕೇರಿತ್ತು.