ಮೋದಿ ಕಾರ್ಯವೈಖರಿಗೆ ಜನತೆಯ ಮೆಚ್ಚುಗೆ

ಗುಂಡ್ಲುಪೇಟೆಯ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಿರಂಜನಕುಮಾರ್,  ಮಹದೇವಪ್ರಸಾದ್, ಸುರೇಶ್, ನಾಗೇಶ್ ಇದ್ದರು.
ಗುಂಡ್ಲುಪೇಟೆಯ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಿರಂಜನಕುಮಾರ್, ಮಹದೇವಪ್ರಸಾದ್, ಸುರೇಶ್, ನಾಗೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಅಭಿಮತ
ಗುಂಡ್ಲುಪೇಟೆ: ನರೇಂದ್ರಮೋದಿ ಅವರ ಕಾರ್ಯಕ್ರಮಗಳನ್ನು ದೇಶದ ಜನತೆ ಒಪ್ಪಿಕೊಂಡಿರುವ ಪರಿಣಾಮ ಪಂಚರಾಜ್ಯ ಚುನಾವಣೆಯಲ್ಲಿ 3 ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮಾಜಿ ಶಾಸಕ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರೊಂದಿಗೆ ವಿಜಯೋತ್ಸವ ಆಚರಿಸಿ ಮಾತನಾಡಿದರು.
70 ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುವಂತಾಗಿದೆ. ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ರಾಜ್ಯದ ಹಾಗೂ ದೇಶದ ಭದ್ರತೆಗೆ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಷಾ ಅವರು ಕೈಗೊಂಡ ಕ್ರಮಗಳಿಂದ ಆಲ್ಲಿನ ಜನತೆ ಬಿಜೆಪಿಯ ಮೇಲೆ ಭರವಸೆ ಇಟ್ಟು ಬಹುಮತ ನೀಡಿದ್ದಾರೆ. ಪುದುಚೇರಿ ಮತ್ತು ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಮರು ಆಯ್ಕೆಯಾಗುವ ಮೂಲಕ ದೇಶದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ ಎಂದು ಹೇಳಿದರು.
ಬಿಜೆಪಿ ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಮಾಜಿ ಅಧ್ಯಕ್ಷ ಎಲ್.ಸುರೇಶ್, ಪ್ರಧಾನ ಕಾರ್ಯದರ್ಶಿ ಸುನಿಲ್ ಮೂಡ್ಲು, ಪುರಸಭೆ ಮಾಜಿ ಸದಸ್ಯ ನಾಗೇಶ್, ಹಾಪ್‌ಕಾಮ್ಸ್ ಜಿಲ್ಲಾಧ್ಯಕ್ಷ ಲೋಕೇಶ್, ಚಾಮುಲ್ ಮಾಜಿ ನಿರ್ದೇಶಕ ಮಾದಪ್ಪ, ಮುಖಂಡರಾದ ಕಲ್ಲಹಳ್ಳಿ ಮಹೇಶ್, ಕೆ.ಎಸ್.ಶಿವಪ್ರಸಾದ್, ಮಂಜುನಾಥ್, ಗುರುಪ್ರಸಾದ್, ರೇವಣ್ಣ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net