ಗುಂಡ್ಲುಪೇಟೆ ತಾಲೂಕಿನ ವಿವಿಧೆಡೆ ಗಿಡ ನೆಟ್ಟು ಆಚರಣೆ

ಗುಂಡ್ಲುಪೇಟೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನೂರುನ್ನೀಸಾ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಂ.ಟಿ.ದೀಪು, ಆರ್.ಬಿ.ಗಿರೀಶ್, ವೆಂಕಟೇಶ್, ಜವರಾಜು ಇತರರು ಇದ್ದರು.
ಗುಂಡ್ಲುಪೇಟೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನೂರುನ್ನೀಸಾ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಂ.ಟಿ.ದೀಪು, ಆರ್.ಬಿ.ಗಿರೀಶ್, ವೆಂಕಟೇಶ್, ಜವರಾಜು ಇತರರು ಇದ್ದರು.
Published on
ಗುಂಡ್ಲುಪೇಟೆ: ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಕಡೆಗಳಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಸಿಗಳನ್ನು ನೆಡಲಾಯಿತು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನೂರುನ್ನೀಸಾ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಎಂ.ಟಿ.ದೀಪು, ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಆರ್.ಬಿ.ಗಿರೀಶ್, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಜವರಾಜು ಹಾಗೂ ಇತರರು ಇದ್ದರು.
ಬಫರ್ ವಲಯದ ವತಿಯಿಂದ ಚಿಕ್ಕತುಪ್ಪೂರು ಸಮೀಪದ ಆದರ್ಶ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಪ್ರಭಾರ ಆರ್‌ಎಫ್‌ಒ ಶಿವಕುಮಾರ್, ಉಪ ವಲಯಾರಣ್ಯಾಧಿಕಾರಿಗಳು, ಶಾಲೆಯ ಮುಖ್ಯಶಿಕ್ಷಕಿ ಸುನೀತಾ ಹಾಗೂ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.
ತಾಲೂಕಿನ ಬನ್ನಿತಾಳಪುರ ಗ್ರಾಮಪಂಚಾಯಿತಿ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವಪರಿಸರ ದಿನವನ್ನು ಆಚರಿಸಲಾಯಿತು.
ಸಿಬ್ಬಂದಿ ಅಶ್ರಫ್, ಬಿಲ್ ಕಲೆಕ್ಟರ್ ಮಲ್ಲು, ಕಂಪ್ಯೂಟರ್ ಆಪರೇಟರ್ ಮಹೇಂದ್ರ ಹಾಗೂ ಇತರರು ಇದ್ದರು.
ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್, ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಮಾಜಿ ಅಧ್ಯಕ್ಷ ಎಲ್.ಸುರೇಶ್, ಪ್ರಧಾನಕಾರ್ಯದರ್ಶಿ ಮಹೇಂದ್ರ, ಪುರಸಭೆ ಮಾಜಿ ಸದಸ್ಯ ನಾಗೇಶ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net