ಪಟ್ಟಣದ ಸ್ವಚ್ಛತೆಗೆ ಸಹಕಾರ ನೀಡಿ

ಹನೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರು ಸ್ವಚ್ಛತಾ ಕಾರ್ಯ ನಡೆಸಿದರು. ರೇಖಾ, ಚಂದ್ರಕುಮಾರ್, ಮದನ್‌ಕುಮಾರ್, ಮಾದೇಶ್ ಮತ್ತಿತರರಿದ್ದರು.
ಹನೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರು ಸ್ವಚ್ಛತಾ ಕಾರ್ಯ ನಡೆಸಿದರು. ರೇಖಾ, ಚಂದ್ರಕುಮಾರ್, ಮದನ್‌ಕುಮಾರ್, ಮಾದೇಶ್ ಮತ್ತಿತರರಿದ್ದರು.
Published on
ಹನೂರು: ತ್ಯಾಜ್ಯವನ್ನು ನಿಗದಿಪಡಿಸಿರುವ ಸ್ಥಳದಲ್ಲಿ ಹಾಕುವುದರ ಮೂಲಕ ಪಟ್ಟಣದ ಸ್ವಚ್ಛತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ ಮನವಿ ಮಾಡಿದರು.
ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಪರಿಸರ ಆರೋಗ್ಯವನ್ನು ವೃದ್ಧಿಸುತ್ತದೆ. ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುತ್ತದೆ. ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಬಸ್ ನಿಲ್ದಾಣದಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ ನಿಗದಿಪಡಿಸಿದ ಸ್ಥಳದಲ್ಲಿ ಹಾಕಬೇಕು. ಇದರಿಂದ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿಗೊಳಿಸುವ ಮೂಲಕ ಸ್ವಚ್ಛತೆ ಕಾಪಾಡಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಪಟ್ಟಣದ ವಾರ್ಡ್‌ಗಳಿಗೆ ಆಗಮಿಸುವ ವಾಹನಗಳಿಗೆ ಹಸಿ ಹಾಗೂ ಒಣ ಕಸವನ್ನು ಪ್ರತ್ಯೇಕವಾಗಿ ಹಾಕಬೇಕು. ಯಾವುದೇ ಕಾರಣಕ್ಕೂ ರಸ್ತೆ ಬದಿ ಬಿಸಾಡಬಾರದು. ಈ ಮೂಲಕ ಪಟ್ಟಣದ ನೈರ್ಮಲ್ಯತೆಗೆ ಸಹಕರಿಸಬೇಕು ಎಂದರು.
ಸಮುದಾಯ ಸಂಘಟನಾಧಿಕಾರಿ ಚಂದ್ರಕುಮಾರ್, ಪ್ರಭಾರ ಆರೋಗ್ಯ ನಿರೀಕ್ಷಕ ಮದನ್‌ಕುಮಾರ್, ಮಾದೇಶ್, ಕಚೇರಿ ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net