ಮಾದಕ ವಸ್ತುಗಳು ಆರೋಗ್ಯಕ್ಕೆ ಹಾನಿಕಾರಕ. ಇದರ ಸೇವೆನೆಯಿಂದ ಜೀವನ ಹಾಳಾಗುತ್ತದೆ. ಈ ಬಗ್ಗೆ ತಿಳಿದಿದ್ದರೂ ಯುವ ಪೀಳಿಗೆ ಈ ಚಟಕ್ಕೆ ಒಳಗಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಬೇಸರದ ಸಂಗತಿ. ಆದ್ದರಿಂದ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಯುವ ಪೀಳಿಗೆ ಚೆನ್ನಾಗಿ ಓದಬೇಕು, ಸಾಧನೆ ಮಾಡಬೇಕು. ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು. ಜನರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಎಚ್ಚರ ವಹಿಸಬೇಕು. ಮಾದಕ ವಸ್ತುಗಳ ಮಾರಾಟ, ಸೇವನೆ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.