ಪ್ರತಿಯೊಬ್ಬ ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿ ನಿಯೋಜಿತ ಸ್ಥಳದಲ್ಲೇ ಖುದ್ದು ಇರಬೇಕು. ಸಾರ್ವಜನಿಕರು ಹಾಗೂ ಸಂಘಟಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನೂಕು ನುಗ್ಗಲು ಉಂಟಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ಅಡ್ಡಿಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಸೂಕ್ಷ್ಮ ಸ್ಥಳ ಹಾಗೂ ವಿಸರ್ಜನಾ ಸ್ಥಳದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಒಂದು ವೇಳೆ ಸಮಸ್ಯೆ ಇದ್ದಲ್ಲಿ ಕೂಡಲೇ ನಮ್ಮ ಗಮನಕ್ಕೆ ತರಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಒಟ್ಟಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಯಶಸ್ವಿಯಾಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ರವಿ, ಎಎಸೈ ಕೃಷ್ಣ ಹಾಗೂ ಇನ್ನಿತರರಿದ್ದರು.