ಪೊಲೀಸರಿಂದ ಮೂಲಭೂತ ಹಕ್ಕು ದಮನ

ಗುಂಡ್ಲುಪೇಟೆ ಪಟ್ಟಣದ ಪ್ರವಾಸಿಮಂದಿರದಲ್ಲಿ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ  ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ  ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಮಾತನಾಡಿದರು. ಮಹದೇವಪ್ಪ, ಸಂಪತ್ತು, ಮಹೇಶ್ ಇದ್ದರು.
ಗುಂಡ್ಲುಪೇಟೆ ಪಟ್ಟಣದ ಪ್ರವಾಸಿಮಂದಿರದಲ್ಲಿ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಮಾತನಾಡಿದರು. ಮಹದೇವಪ್ಪ, ಸಂಪತ್ತು, ಮಹೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಹೇಳಿಕೆ
ಗುಂಡ್ಲುಪೇಟೆ: ಏ.21ರಂದು ಪಟ್ಟಣಕ್ಕೆ ಬರುತ್ತಿರುವ ಮುಖ್ಯಮಂತ್ರಿ ವಿರುದ್ಧ ಕಪ್ಪುಪಟ್ಟಿಧರಿಸಿ ಪ್ರತಿಭಟನೆ ನಡೆಸಲು ಪೊಲೀಸರು ಅಡ್ಡಿಪಡಿಸುವ ಮೂಲಕ. ಮೂಲಭೂತ ಹಕ್ಕುಗಳ ದಮನ ಮಾಡುತ್ತಿದ್ದಾರೆ ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಈಗಾಗಲೇ ತಾಲೂಕಿನ ಕೆರೆಗಳಿಗೆ ಮೂರು ವರ್ಷಗಳಿಂದ ನೀರು ತುಂಬಿಸದೆ ಅಂತರ್ಜಲ ಮಟ್ಟದಲ್ಲಿ ತೀವ್ರಕುಸಿತವಾಗಿದ್ದು
ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜನ,ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಆದರೆ ಸರ್ಕಾರ ಕೆರೆಗಳಿಗೆ ನೀರು ತುಂಬಿಸುವ ಬದಲು ಹೊಸದಾಗಿ110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಭೂಮಿ ಪುಜೆ ಮಾಡುವ ಮೂಲಕ ಜನತೆಯ ದಾರಿತಪ್ಪಿಸುತ್ತಿದ್ದಾರೆ. ಅಧಿಕಾರಿಗಳ ಮಾತು ಕೇಳಿ ಕೋಟ್ಯಾಂತರ ರೂ., ವೆಚ್ಚದಲ್ಲಿ ಹೊಸ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕ ಹಣದ ದುರುಪಯೋಗಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.
ಹಿಂದೆಯು ಸಿದ್ದರಾಮಯ್ಯ ಅವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಮನವಿಕೊಡುವುದು ಅವರೊಂದಿಗೆ ಚರ್ಚಿಸುವುದು ವ್ಯರ್ಥ. ರೈತಸಂಘಟನೆಯ ಸದಸ್ಯರು ಕಪ್ಪುಪಟ್ಟಿ ಧರಿಸಿ ಒಂದೆಡೆ ಶಾಂತಿಯುತವಾಗಿ ಕುಳಿತು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದರು ಪೊಲೀಸರು ಅವಕಾಶ ನೀಡುತ್ತಿಲ್ಲ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಬಂಧಿಸುವುದಾಗಿ ಬೆದರಿಕೆ ಹಾಕುವ ಮೂಲಕ ನಮ್ಮ ಮೂಲಭೂತ ಹಕ್ಕುಗಳನ್ನು ದಮನ ಮಾಡುತ್ತಿದ್ದಾರೆ. ಆದ್ದರಿಂದ ಹಿರಿಯ ಅಧಿಕಾರಿಗಳು ಮಧ್ಯಪ್ರದೇಶ ಮಾಡಿ ಶಾಂತಿಯುತ ಪ್ರತಿಭಟನೆಗೆ ರಕ್ಷಣೆ ನೀಡಬೇಕೆಂದು ಒತ್ತಾಯಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಉಪಾಧ್ಯಕ್ಷ ಕುಂದಕೆರೆ ಸಂಪತ್ತು, ತಾಲೂಕು ಅಧ್ಯಕ್ಷ ಮಹೇಶ ಸೇರಿದಂತೆ ಹಲವರು ಇದ್ದರು.
ಫೋಟೋ ಇದೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net