ಮೂವರ ಶೂಟೌಟ್ ಪ್ರಕರಣದಿಂದ ಕುಟುಂಬಸ್ಥರು ಹಾಗೂ ಪ್ರತಿಭಟನಾಕಾರರು ರೊಚ್ಚಿಗೆದ್ದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹನೂರಿನ ಅರಣ್ಯ ಇಲಾಖೆ ಕಚೇರಿ ಗೇಟ್ ಬಂದ್ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಕಾವೇರಿ ವನ್ಯಜೀವಿ ವಿಭಾಗದ ತೊಮಿಯಾರ್ ಪಾಳ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಬೇಟೆಗಾರರು ಬಲಿಯಾದ ಸುದ್ದಿ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಶನಿವಾರ ತಾಲೂಕಿನ ಶಾಗ್ಯ ಹಾಗೂ ಕಳ್ಳಿದೊಡ್ಡಿ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ಬೈಕ್ ಹಾಗೂ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ವಸತಿ ಗೃಹವನ್ನು ಒಳಗೊಂಡಿರುವ ವಲಯ ಅರಣ್ಯಾಧಿಕಾರಿ ಕಚೇರಿಗೆ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿ ದ್ದಾರೆ.