ಪೋಲಿಯೋ ಹನಿ ಆರೋಗ್ಯಕ್ಕೆ ಜೀವ ರಕ್ಷಕ

ಹನೂರಿನಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅವರು ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಡಾ. ಪ್ರಕಾಶ್, ಡಾ. ರಾಜೀವ್, ಮಾದಪ್ಪ ಇತರರಿದ್ದರು.
ಹನೂರಿನಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅವರು ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಡಾ. ಪ್ರಕಾಶ್, ಡಾ. ರಾಜೀವ್, ಮಾದಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ.ಆರ್. ಮಂಜುನಾಥ್ ಅಭಿಮತ
ಹನೂರು: ಮಕ್ಕಳ ಭವಿಷ್ಯದ ಉತ್ತಮ ಆರೋಗ್ಯಕ್ಕೆ ಪೋಲಿಯೋ ಹನಿ ಜೀವ ರಕ್ಷಕ. ಹಾಗಾಗಿ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪೋಲಿಯೋ ಹನಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅತಿ ಅವಶ್ಯಕ. ಅಂಗವಿಕಲತೆಯನ್ನು ಹೊರದೂಡುವಲ್ಲಿ ಶ್ರೀರಕ್ಷೆಯಾಗಿದೆ. ಉತ್ತಮ ಆರೋಗ್ಯ ಹೊಂದುವಲ್ಲಿ ಸಹಕಾರಿಯಾಗಿದೆ. ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿ ಹಾಗೂ ಬಸ್ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಲಸಿಕೆ ಹಾಕಲಿದ್ದಾರೆ. ಆದ್ದರಿಂದ ಪಾಲಕರು 5 ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ತಾಲೂಕಿನಲ್ಲಿ 11,508 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿಯನ್ನು ಹೊಂದಲಾಗಿದೆ. 134 ಬೂತ್‌ಗಳನ್ನು ತೆರೆಯಲಾಗಿದ್ದು, ಪ್ರತಿ ಬೂತ್‌ಗೂ ತಲಾ ನಾಲ್ವರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಲಸಿಕೆಯನ್ನು ಪೂರೈಕೆ ಮಾಡಲಾಗಿದೆ. ವಾಹನದ ವ್ಯವಸ್ಥೆ ಕಲ್ಪಿಸಲಾಗಿದೆ. ಮೂರು ದಿನಗಳ ಕಾಲ ಅಭಿಯಾನಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿ ಮನೆ ಮನೆಗೆ ತೆರಳಿ ಮಗುವಿಗೆ ಪೋಲಿಯೋ ಹನಿ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.
ವೈದ್ಯ ಡಾ. ರಾಜೀವ್, ರೈತ ಸಂಘದ ತಾಲೂಕು ಅಧ್ಯಕ್ಷ ಮಾದಪ್ಪ, ಮುಖಂಡರಾದ ಅಮಿನ್, ಚಿನ್ನವೆಂಕಟ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net