ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಕಮಲಮ್ಮ ಮಾತನಾಡಿ, ನಾರಿ ಶಕ್ತಿ ವಂದನ್ ಕಾಯ್ದೆ ಬೆಂಬಲಿಸಿ ಏ.21ರಂದು ಚಾಮರಾಜನಗರದಲ್ಲಿ ಮ್ಯಾರಥಾನ್, ಬೈಕ್ ರ‌್ಯಾಲಿ ಮತ್ತು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಮುಖಂಡರಾದ ಹೊನ್ನೂರು ಮಹದೇವಸ್ವಾಮಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಮತಾ, ಶೈಲ, ಶೇಷಪ್ಪ ಹಾಜರಿದ್ದರು.