ಕುದೇರು ಗ್ರಾಮದಲ್ಲಿ ಭಾವಚಿತ್ರ ಮೆರವಣಿಗೆ

 ಕುದೇರು ಗ್ರಾಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಎತ್ತಿನಗಾಡಿ ಮತ್ತು ಭೀಮ ರಥದಲ್ಲಿ ಮೆರವಣಿಗೆ ಮಾಡಲಾಯಿತು.
ಕುದೇರು ಗ್ರಾಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಎತ್ತಿನಗಾಡಿ ಮತ್ತು ಭೀಮ ರಥದಲ್ಲಿ ಮೆರವಣಿಗೆ ಮಾಡಲಾಯಿತು.
Published on
ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮದಲ್ಲಿ ಅಂಬೇಡ್ಕರ್ ಅವರ 135ನೇ ಜನ್ಮ ದಿನವನ್ನು ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸೇವಾ ಸಂಘದಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ಜಯಂತಿ ಹಿನ್ನೆಲೆಯಲ್ಲಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ಬಳಿ ಅನ್ನಸಂತರ್ಪಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದರೊಂದಿಗೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹೂವಿನಿಂದ ಅಲಂಕರಿಸಿ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಭಾವಚಿತ್ರವನ್ನು ಭೀಮರಥ ಮತ್ತು ಎತ್ತಿನ ಗಾಡಿಯಲ್ಲಿ ಇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಗಾರಿ, ಪೂಜೆ ಕುಣಿತ ಮತ್ತು ಗಾಡಿಗೊಂಬೆ ಕಲಾ ತಂಡಗಳು ಪಾಲ್ಗೊಂಡಿದ್ದವು. ಗ್ರಾಮದಲ್ಲಿ ದೀಪಾಲಂಕಾರ ಕಂಗೊಳಿಸುತ್ತಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net