ಸಭೆ ಆಯೋಜನೆ ಸ್ಥಳದಲ್ಲಿ ಜನಜಾಗೃತಿಗಾಗಿ ಬರ ನಿರ್ವಹಣೆ, ಬಾಲ್ಯವಿವಾಹ ತಡೆ, ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ, ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳು, ಕೃಷಿ, ತೋಟಗಾರಿಕೆ, ರೇಷ್ಮೆ, ನಗರಸಭೆ, ಅರಣ್ಯ, ವನ್ಯಜೀವಿ ಸಂರಕ್ಷಣೆ, ಪೋಡಿಖಾತೆ, ಕೈಗಾರಿಕೆ, ಆರೋಗ್ಯ, ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಐ.ಇ.ಸಿ ಕಾರ್ಯಕ್ರಮಗಳ ಕುರಿತು ಮಳಿಗೆಗಳನ್ನು ತೆರೆಯಬೇಕು. ಸಭೆಯಲ್ಲಿ ಭಾಗವಹಿಸುವ ಫಲಾನುಭವಿಗಳಿಗೆ ಪಿಂಚಣಿ, ಪಡಿತರ ಚೀಟಿ, ವಿವಿಧ ಪ್ರಮಾಣಪತ್ರಗಳ ಸೌಲಭ್ಯಗಳನ್ನು ಸ್ಥಳದಲ್ಲಿಯೇ ವಿತರಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.