ಕಲೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

ಕೊಳ್ಳೇಗಾಲ ಪಟ್ಟಣದ ಆರ್.ಸಿ ಮಿಷನ್ ಶಾಲೆಯಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಕರ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- ಕಲೋತ್ಸವ ಕಾರ್ಯ ಕ್ರಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ  ನೀಡಿದರು. ಚಂದ್ರು, ಗುರುಶಾಂತಪ್ಪ ಬೆಳ್ಳುಂಗಡಿ, ಮಂಜುಳಾ, ಮಹದೇವ ಕುಮಾರ್ ಇತರರಿದ್ದಾರೆ.
ಕೊಳ್ಳೇಗಾಲ ಪಟ್ಟಣದ ಆರ್.ಸಿ ಮಿಷನ್ ಶಾಲೆಯಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಕರ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- ಕಲೋತ್ಸವ ಕಾರ್ಯ ಕ್ರಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು. ಚಂದ್ರು, ಗುರುಶಾಂತಪ್ಪ ಬೆಳ್ಳುಂಗಡಿ, ಮಂಜುಳಾ, ಮಹದೇವ ಕುಮಾರ್ ಇತರರಿದ್ದಾರೆ.
Published on
ಕೊಳ್ಳೇಗಾಲ: ಮಕ್ಕಳಲ್ಲಿರುವ ಸೂಕ್ತ ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಸಹಕಾರಿ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಪಟ್ಟಣದ ಆರ್.ಸಿ. ಮಿಷನ್ ಶಾಲೆಯಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಕರ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಲ್ಲರಲ್ಲೂ ಸಮಾನ ಪ್ರತಿಭೆ ಇಲ್ಲದಿರಬಹುದು. ಆದರೆ ಪ್ರತಿಭೆ ಬೆಳೆಸಿಕೊಳ್ಳಲು ಸಮಾನ ಅವಕಾಶವನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ ಎಂದು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಹೇಳಿದ್ದಾರೆ. ಸರ್ಕಾರ ಮಕ್ಕಳ ಪ್ರತಿಭೆಗಳ ಅರಳಿಸಲು ಸಾಕಷ್ಟು ಕಾರ್ಯಕ್ರಮವನ್ನು ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ರೂಪಿಸಿದೆ. ನಮ್ಮ ಜಿಲ್ಲೆ ಕಲೆಗೆ ಹೆಸರುವಾಸಿಯಾಗಿದೆ. ಸ್ಥಳೀಯ ಕಲೆಗಳು ಉಳಿಯಬೇಕು ಬೆಳೆಯಬೇಕು ಎಂದು ಹೇಳಿದರು. ವೇದಿಕೆ ಕಾರ್ಯಕ್ರಮಗಳ ಬಳಿಕ ವಿವಿಧ ಶಾಲೆಗಳಿಂದ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರಂಜಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲೂಕು ಅಧ್ಯಕ್ಷ ರಾಜೇಂದ್ರ, ತಾ.ಪಂ. ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ಬಿ.ಆರ್.ಸಿ ಮಹದೇವ ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಅಧ್ಯಕ್ಷ ಅಕ್ಬರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್, ಕಾರ್ಯಕ್ರಮ ನೂಡಲ್ ಅಧಿಕಾರಿ ವಿಜಯ್ ಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಪಾಧ್ಯಕ್ಷ ಬುಕಾನಿ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net