ಮಡಿವಾಳ ಸಮುದಾಯ ಮುಖಂಡರ ಪೂರ್ವಭಾವಿ ಸಭೆ

 ಹನೂರಿನಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಸಂಬಂಧ ಆಯೋಜಿಸಿದ್ದ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ತಾಲೂಕು ಸಂಘದ ಅಧ್ಯಕ್ಷ ವಿಜಯಕುಮಾರ್ ಮಾತನಾಡಿದರು. ಮೋಹನ್‌ಕುಮಾರ್, ಮಾದೇವ, ಕೃಷ್ಣಮೂರ್ತಿ ಇತರರಿದ್ದರು.
ಹನೂರಿನಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಸಂಬಂಧ ಆಯೋಜಿಸಿದ್ದ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ತಾಲೂಕು ಸಂಘದ ಅಧ್ಯಕ್ಷ ವಿಜಯಕುಮಾರ್ ಮಾತನಾಡಿದರು. ಮೋಹನ್‌ಕುಮಾರ್, ಮಾದೇವ, ಕೃಷ್ಣಮೂರ್ತಿ ಇತರರಿದ್ದರು.
Published on
ಹನೂರು: ಪಟ್ಟಣದಲ್ಲಿ ಫೆ.1ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಹಾಗೂ ಹೊಸದಾಗಿ ಅಸ್ತಿತ್ವಕ್ಕೆ ತರಲು ನಿರ್ಧರಿಸಿರುವ ಜಿಲ್ಲಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಸಂಬಂಧ ಶನಿವಾರ ಆರ್‌ಎಂಸಿಯಲ್ಲಿ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.
ಮಡಿವಾಳ ಮಾಚಿದೇವ ಸಂಘದ ತಾಲೂಕು ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಮಾಚಿದೇವರು ಮಡಿವಾಳ ಸಮುದಾಯದ ಮಹಾನ್ ಚೇತನ. ಸಮಾಜದಲ್ಲಿದ್ದ ಅಸಮಾನತೆಯನ್ನು ಹೋಗಲಾಡಿಸಲು ಜೀವನವನ್ನೇ ಮುಡಿಪಾಗಿಟ್ಟ ಜೀವಾತ್ಮ. ಇವರು ನೀಡಿರುವ ಮಾರ್ಗದರ್ಶನ ಪ್ರತಿ ಸಮಾಜಕ್ಕೂ ಅಗತ್ಯವಾಗಿದೆ. ಹಾಗಾಗಿ ಶ್ರೀಗಳ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಇನ್ನು ಜಿಲ್ಲೆಯಲ್ಲಿ ಸಮುದಾಯವನ್ನು ಸಂಘಟಿಸುವ ಉದ್ದೇಶದಿಂದ ಜಿಲ್ಲಾ ಸಂಘವನ್ನು ಅಸ್ತಿತ್ವಕ್ಕೆ ತರಬೇಕಿದೆ. ಹನೂರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಸಂಬಂಧ ಶಾಸಕರ ಅಭಿಪ್ರಾಯವನ್ನು ಪಡೆಯಬೇಕಿದೆ. ಆದ್ದರಿಂದ ಪ್ರತಿಯೊಬ್ಬರೂ ಅಗತ್ಯ ಸಲಹೆ, ಸೂಚನೆಯನ್ನು ನೀಡುವಂತೆ ಮನವಿ ಮಾಡಿದರು.
ಈ ಸಂಬಂಧ ಸಮುದಾಯದ ಮುಖಂಡರು ಅಗತ್ಯ ಸಲಹೆಯನ್ನು ನೀಡಿದರು. ಜಿಲ್ಲಾ ಸಂಘದ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಹನೂರಿನಿಂದ ವಿಜಯಕುಮಾರ್ ಹಾಗೂ ಡಿ.ಆರ್.ಮಹಾದೇಶ್ ಅವರನ್ನು ಸಭೆಯಲ್ಲಿ ಸೂಚಿಸಲಾಯಿತು.
ಮುಖಂಡರಾದ ಕೃಷ್ಣಮೂರ್ತಿ, ರುದ್ರಣ್ಣ, ಮೋಹನ್‌ಕುಮಾರ್, ಮಾದೇವ, ಕುಮಾರ್, ನಂದೀಶ್, ಶಾಂತರಾಜು ಹಾಗೂ ಇನ್ನಿತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net