ಅರಣ್ಯ, ವನ್ಯಜೀವಿಗಳ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಲಿ

ದಿನ್ನಳ್ಳಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆ ಸಂಬಂಧ ಅರಣ್ಯ ಇಲಾಖೆಯಿಂದ ಗ್ರಾಮಸ್ಥರ ಸಭೆ ಆಯೋಜಿಸಲಾಗಿತ್ತು.  ನಾಗರಾಜು, ವಿನಾಯಕ, ಹುಚ್ಚೇಗೌಡ, ಕೃಷ್ಣನಾಯಕ್ ಇತರರು ಇದ್ದರು.
ದಿನ್ನಳ್ಳಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆ ಸಂಬಂಧ ಅರಣ್ಯ ಇಲಾಖೆಯಿಂದ ಗ್ರಾಮಸ್ಥರ ಸಭೆ ಆಯೋಜಿಸಲಾಗಿತ್ತು. ನಾಗರಾಜು, ವಿನಾಯಕ, ಹುಚ್ಚೇಗೌಡ, ಕೃಷ್ಣನಾಯಕ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆರ್‌ಎಫ್‌ಒ ನಾಗರಾಜು ಸಲಹೆ
  • ದಿನ್ನಳ್ಳಿಯಲ್ಲಿ ಗ್ರಾಮ ಅರಣ್ಯ ಸಮಿತಿ ಸದಸ್ಯರು ಸಭೆ
ಹನೂರು: ಅರಣ್ಯ ಹಾಗೂ ವನ್ಯಜೀವಿಗಳ ರಕ್ಷಣೆ ಎಲ್ಲರ ಆದ್ಯ ಕರ್ತವ್ಯ. ಹಾಗಾಗಿ ಪ್ರತಿಯೊಬ್ಬರೂ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಆರ್‌ಎಫ್‌ಒ ನಾಗರಾಜು ಹೇಳಿದರು.
ತಾಲೂಕಿನ ಕಾಡಂಚಿನ ಗ್ರಾಮ ದಿನ್ನಳ್ಳಿಯಲ್ಲಿ ಭಾನುವಾರ ಮಾನವ-ವನ್ಯಜೀವಿ ಸಂಘರ್ಷ ತಡೆ ಸಂಬಂಧ ಆಯೋಜಿಸಿದ್ದ ಗ್ರಾಮ ಅರಣ್ಯ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿದರು.
ಇತ್ತೀಚೆಗೆ ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ವಿಷಪ್ರಶಾನದಿಂದ ಮೃತಪಟ್ಟ ಹುಲಿಗಳ ಪ್ರಕರಣ ಅತ್ಯಂತ ನೋವಿನ ಸಂಗತಿ. ಯಾವುದೇ ಕಾರಣಕ್ಕೂ ಇಂಥ ದುರ್ಘಟನೆ ಮರುಕಳಿಸಬಾರದು. ವನ್ಯಜೀವಿಗಳಿಂದ ಅರಣ್ಯ ಪ್ರದೇಶ ಸಮೃದ್ಧಿಯಿಂದ ಕೂಡಿರುತ್ತದೆ.
ಇದರಿಂದ ಮಾನವ ಸಂಕುಲಕ್ಕೆ ಉತ್ತಮ ಪರಿಸರವನ್ನು ಒದಗಿಸುತ್ತದೆ. ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಅರಣ್ಯ ಹಾಗೂ ವನ್ಯಜೀವಿ ಉಳಿವಿಗೆ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಕಾಡು ಪ್ರಾಣಿಗಳಿಂದ ಹಾನಿಯಾದ್ದಲ್ಲಿ ಹಾಗೂ ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಈ ಭಾಗದಲ್ಲಿ ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿವೆ. ಇದರಿಂದ ತೊಂದರೆ ಅನುಭವಿಸುತ್ತಿದ್ದೇವೆ. ಹಾಗಾಗಿ ಹಾವಳಿಯನ್ನು ತಡೆಗಟ್ಟಬೇಕು. ಬೆಳೆನಷ್ಟಕ್ಕೆ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಲಾಯಿತು.
ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾದ ಹುಚ್ಚೇಗೌಡ, ಕೃಷ್ಣನಾಯಕ್, ಡಿಆರ್‌ಎಫ್‌ಒ ವಿನಾಯಕ, ನೌಕರ ಸುರೇಶ ಭೀಮಶಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net