ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರ ಸಂಘದ ಪದಾಧಿಕಾರಿಗಳು ಗುರುವಾರ ಸೆಸ್ಕ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕೊಳ್ಳೇಗಾಲ:ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರ ಸಂಘದ ಪದಾಧಿಕಾರಿಗಳು ಸೆಸ್ಕ್ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಕೆಪಿಟಿಸಿಎಲ್ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ನಂಜುಂಡೇಗೌಡ ಮಾತನಾಡಿ, ಸರ್ಕಾರದ ಅಧೀನದಲ್ಲಿರುವ ವಿದ್ಯುತ್ ಸಂಸ್ಥೆಯನ್ನು ಖಾಸಗೀಕರಣ ಮಾಡಿದರೆ ಬಹಳ ಸಮಸ್ಯೆಯಾಗಲಿದೆ. ಮಿಲಿಟರಿ, ಪೊಲೀಸ್ ಇಲಾಖೆ ಹೊರತುಪಡಿಸಿ ಬೇರೆಲ್ಲ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿರುವುದು ಸರಿಯಲ್ಲ. ಇದ್ದರಿಂದ ಡಾ.ಬಿ.ಆರ್.ಅಂಬೇಡ್ಕರ್ ಬರೆದಿರುವ ಸಂವಿಧಾನದಡಿ ಸರ್ಕಾರ ಅಧೀನದಲ್ಲಿರುವ ಸಂಸ್ಥೆಗಳು ಸರ್ಕಾರದ ವ್ಯವಸ್ಥೆಯೊಳಗೆ ಇರಬೇಕೆಂಬುದಾಗಿದೆ. ಸಂವಿಧಾನದ ನಿಲುವು ಉಳಿಯಬೇಕಾದರೆ ಸರ್ಕಾರಿ ಅಧೀನದಲ್ಲಿರುವ ಸಂಸ್ಥೆಗಳು ಖಾಸಗೀಕರಣವಾಗಬಾರದು. ವಿದ್ಯುತ್ ಕಾರ್ಯದ ವೇಳೆ ಹಲವಾರು ಲೈನ್‌ಮನ್‌ಗಳಿಗೆ ಸಾವು-ನೋವುಗಳು ಸಂಭವಿಸಿದೆ. ಇದರಿಂದ ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ ಎಂದರು.
ಕೆಪಿಟಿಸಿಎಲ್ ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣ್ಣ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡಲು ಹೊರಟಿರುವುದು ಸರಿಯಲ್ಲ. ಕೂಡಲೇ ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸೆಸ್ಕ್ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ತಬಸ್ಸುಮ್ ಅಪ್ಜಾ, ಎಇಇ ಶ್ರೀನಿಧಿ, ಎಂ.ರಾಜು , ಲೆಕ್ಕಾಧಿಕಾರಿ ವಿನೋದ್‌ಕುಮಾರ್, ಲೆಕ್ಕಾಧಿಕಾರಿ ಪ್ರಸನ್ನ, ಕೇಂದ್ರ ಕಾರ್ಯಕಾರಿಣಿ ಸದಸ್ಯರು ಮಹದೇವ ಹಾಗೂ ನೌಕರರು, ಸಿಬ್ಬಂದಿ ಇದ್ದರು.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರ ಸಂಘದ ಪದಾಧಿಕಾರಿಗಳು ಗುರುವಾರ ಸೆಸ್ಕ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.