ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ

ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಲಸುಬ್ರಹ್ಮಣ್ಯಂ, ಲೇಪಾಕ್ಷಿ, ಲಿಂಗರಾಜು, ಮಂಜುನಾಥ್, ಆಶಾ ಮೋಹನ್, ನಂಜುಂಡಸ್ವಾಮಿ, ದುಗ್ಗಟ್ಟಿ ಮಲ್ಲಿಕಾರ್ಜುನಸ್ವಾಮಿ, ಪಡಗೂರು ಸುನೀಲ್, ರಾಜೇಂದ್ರ, ಮುಕುಂದ್ ಇನ್ನಿತರರಿದ್ದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಲಸುಬ್ರಹ್ಮಣ್ಯಂ, ಲೇಪಾಕ್ಷಿ, ಲಿಂಗರಾಜು, ಮಂಜುನಾಥ್, ಆಶಾ ಮೋಹನ್, ನಂಜುಂಡಸ್ವಾಮಿ, ದುಗ್ಗಟ್ಟಿ ಮಲ್ಲಿಕಾರ್ಜುನಸ್ವಾಮಿ, ಪಡಗೂರು ಸುನೀಲ್, ರಾಜೇಂದ್ರ, ಮುಕುಂದ್ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • private educational institutions
ಚಾಮರಾಜನಗರ: ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಆಡಳಿತಾತ್ಮಕ, ಆರ್ಥಿಕ ಹಾಗೂ ಕಾನೂನು ಸಂಬಂಧಿತ ಸಮಸ್ಯೆಗಳ ಪರಿಹಾರ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಒತ್ತಾಯಿಸಿ ಜಿಲ್ಲಾ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳು ಸಮಾಜದ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಪಾತ್ರವನ್ನು ವಹಿಸುತ್ತಿವೆ. ರಾಜ್ಯ ಸರ್ಕಾರ ವಿವಿಧ ಅಸಮರ್ಪಕ ನೀತಿಗಳು, ಜಟಿಲ ನಿಯಮಗಳು, ಅನಗತ್ಯ ಶುಲ್ಕ ವಸೂಲಾತಿಗಳು ಹಾಗೂ ಶಿಕ್ಷಣ ಸ್ನೇಹಿ ಅಲ್ಲದ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವ ಮೂಲಕ ಖಾಸಗಿ ಶಾಲೆಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿದೆ ಎಂದು ದೂರಿದರು.
ಪ್ರತಿಯೊಂದು ಶಾಲೆಗಳಿಗೂ 10 ವರ್ಷಗಳ ಅವಧಿಗೆ ಮಾನ್ಯತೆ ನವೀಕರಣ ನೀಡಬೇಕು. 15 ಮೀಟರ್‌ಗಿಂತ ಕಡಿಮೆ ಎತ್ತರದ ಶಾಲಾ ಕಟ್ಟಡಗಳಿಗೆ ೈರ್ ಎನ್‌ಓಸಿ ಬೇಡಿಕೆ, ಶಾಲಾ ಕಟ್ಟಡಗಳಿಗೆ ಭೂ ಪರಿವರ್ತನೆ ಮತ್ತು ಬಿಲ್ಡಿಂಗ್ ಸೇಫ್ಟಿ ನಿಯಮವನ್ನು ರದ್ದುಗೊಳಿಸಬೇಕು. ಅನಗತ್ಯ ಶುಲ್ಕ-ವಸೂಲಾತಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಬಾಕಿ ಇರುವ ಆರ್‌ಟಿಇ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಶಾಲಾ ವಾಹನಗಳ ರೋಡ್ ಟ್ಯಾಕ್ಸ್ ಮತ್ತು ಆರ್‌ಟಿಒ ಶುಲ್ಕವನ್ನು ಕಡಿಮೆಗೊಳಿಸಬೇಕು. ಜಿಲ್ಲಾ ಮಟ್ಟದಲ್ಲಿ ಇಎಸ್‌ಐ ಸಿಬ್ಬಂದಿಗೆ ವೈದ್ಯಕೀಯ ಸೌಲಭ್ಯ ದೊರೆಯುವಂತೆ ಮಾಡಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಉಚಿತ ನೋಂದಣಿಗೆ ಅವಕಾಶ ಮಾಡಿಕೊಡಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂಬ ಹಕ್ಕೋತ್ತಾಯದ ಮನವಿ ಪತ್ರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಮೋನಾರೋತ್ ಅವರಿಗೆ ಮನವಿ ಸಲ್ಲಿಸಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ಲೇಪಾಕ್ಷಿ, ಜಿಲ್ಲಾಧ್ಯಕ್ಷ ಲಿಂಗರಾಜು, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಆಶಾ ಮೋಹನ್, ಪದಾಧಿಕಾರಿಗಳಾದ ನಂಜುಂಡಸ್ವಾಮಿ, ದುಗ್ಗಟ್ಟಿ ಮಲ್ಲಿಕಾರ್ಜುನಸ್ವಾಮಿ, ಪಡಗೂರು ಸುನೀಲ್, ಹನೂರು ರಾಜೇಂದ್ರ, ಮುಕುಂದ್, ಲತಾ, ಆದರ್ಶ್ ಹಾಗೂ ಇತರರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net