ರಾಜ್ಯ ರೈತ ಸಂಘದ ಪದಾಧಿಕಾರಿಗಳಿಂದ ಪ್ರತಿಭಟನೆ

ಕೊಳ್ಳೇಗಾಲದ ಸೆಸ್ಕ್ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿಯ ಪದಾಧಿಕಾರಿಗಳು ಪಂಪ್ ಸೆಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಶಿವಮಲ್ಲು, ರವಿನಾಯ್ಡು, ರಾಮಣ್ಣ ಸತ್ತೇಗಾಲ, ಗೌಡೇಗೌಡ ಇತರರಿದ್ದರು.
ಕೊಳ್ಳೇಗಾಲದ ಸೆಸ್ಕ್ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿಯ ಪದಾಧಿಕಾರಿಗಳು ಪಂಪ್ ಸೆಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಶಿವಮಲ್ಲು, ರವಿನಾಯ್ಡು, ರಾಮಣ್ಣ ಸತ್ತೇಗಾಲ, ಗೌಡೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೃಷಿ ಪಂಪ್ ಸೆಟ್‌ಗಳಿಗೆ 7 ಗಂಟೆ ನಿರಂತರ 3 ಫೇಸ್ ವಿದ್ಯುತ್ ನೀಡಲು ಒತ್ತಾಯ
ಕೊಳ್ಳೇಗಾಲ: ವಿದ್ಯುತ್ ಸಮಸ್ಯೆ ಖಂಡಿಸಿ ಸೋಮವಾರ ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಕಚೇರಿ ಎದುರು ಪ್ರತಿಭಟನಾಕಾರರು ಜಮಾಯಿಸಿ ಸೆಸ್ಕ್ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದರು. ಬೇಸಿಗೆಯಲ್ಲಿ ಹಗಲು ಹೊತ್ತಿನಲ್ಲಿ ಕೃಷಿ ಪಂಪ್ ಸೆಟ್‌ಗಳಿಗೆ 7 ಗಂಟೆ ನಿರಂತರ 3 ಫೇಸ್ ವಿದ್ಯುತ್ ನೀಡಬೇಕು. ಕೊಳ್ಳೇಗಾಲ ಉಪ್ಪಾರ ಮೊಳೆಯು ನಗರಸಭೆ ವ್ಯಾಪ್ತಿಗೆ ಸೇರಿದ್ದಾಗಿದ್ದು ಈ ಗ್ರಾಮಕ್ಕೆ ನಿರಂತರ ವಿದ್ಯುತ್ ನೀಡುವುದನ್ನು ಮುಂದುವರಿಸಬೇಕೆಂದು ಆಗ್ರಹಿಸಿದರು.
ಸ್ಥಳಕ್ಕೆ ಸೆಸ್ಕ್ ಇಇ ತಬಸ್ಸುಮ್ ಅಪ್ಜಾ ಮತ್ತು ಎಇಇ ರಾಜು ಆಗಮಿಸಿ, ರೈತರ ಸಮಸ್ಯೆ ಅಹವಾಲು ಸ್ವೀಕರಿಸಿ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಶಿವಮಲ್ಲು, ಜಿಲ್ಲಾ ಖಾಯಂ ಸದಸ್ಯ ರವಿನಾಯ್ಡು, ರಾಮಣ್ಣ ಸತ್ತೇಗಾಲ, ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ನಿಕೋಲಸ್, ಚಾರ್ಲಿ, ಮಸಣಶೆಟ್ಟಿ, ಶಿವರಾಜು ಸರಗೂರು, ದೊಡ್ಡಯ್ಯ, ರಾಜಣ್ಣ, ಮಲ್ಲಪ್ಪ, ತಾಂಡವ ಮೂರ್ತಿ, ಮದುವನ ಅರಸ್, ವೆಂಕಟೇಶ್, ಮಹೇಶ್, ಮಾದೇವಶೆಟ್ಟಿ, ಸಿದ್ದಪ್ಪಸ್ವಾಮಿ, ಜಯಣ್ಣ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net