ಸಾಮೂಹಿಕ ರಾಜ್ಯ ರೈತ ಸಂಘಟನೆಯಿಂದ ಧರಣಿ

ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ರೈತರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಭೇಟಿ ನೀಡಿ ಸಮಸ್ಯೆ ಆಲಿಸಿದರು. ಶ್ರೀರೂಪಾ, ಎಂ.ಮುತ್ತುರಾಜು, ಹೊನ್ನೂರು ಪ್ರಕಾಶ್ ಇನ್ನಿತರರಿದ್ದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ರೈತರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಭೇಟಿ ನೀಡಿ ಸಮಸ್ಯೆ ಆಲಿಸಿದರು. ಶ್ರೀರೂಪಾ, ಎಂ.ಮುತ್ತುರಾಜು, ಹೊನ್ನೂರು ಪ್ರಕಾಶ್ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಕೆ
  • ಅಕ್ರಮ ರೆಸಾರ್ಟ್ ತೆರವುಗೊಳಿಸಿ
  • ರೈತರೊಂದಿಗೆ ಕುಳಿತ ಜಿಲ್ಲಾಧಿಕಾರಿ
ಚಾಮರಾಜನಗರ: ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆ ಬಂಡೀಪುರ ಹುಲಿ ಸಂರಕ್ಷತ ಪ್ರದೇಶದಲ್ಲಿ ಸಾರಿ ಪುನರಾರಂಭ ಮಾಡಿರುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು, ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದರು. ರಾಜ್ಯ ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಬಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಸಾಕಷ್ಟು ಜನರು ಮೃತಪಟ್ಟಿದ್ದರು. ಅದಲ್ಲದೆ ಹಲವಾರು ಹುಲಿಗಳು ಹಸುನೀಗಿದ್ದವು. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಬಂಡೀಪು ಮತ್ತು ನಾಗರಹೊಳೆಯಲ್ಲಿ ಸಾರಿಯನ್ನು ಬಂದ್ ಮಾಡಿದ್ದರು. ಆದರೆ ಯಾರದ್ದೋ ಲಾಭಿ ಮತ್ತು ಲಂಚಕ್ಕಾಗಿ ಮತ್ತೊಮ್ಮೆ ಸಾರಿ ಪ್ರಾರಂಭಿಸಿರುವುದು ಅತ್ಯಂತ ಖಂಡನೀಯ ಎಂದರು.
ಬಂಡೀಪುರ ಮತ್ತು ನಾಗರಹೊಳೆ ವ್ಯಾಪ್ತಿಯಲ್ಲಿ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರು ಏನನ್ನು ಪರಿಶೀಲನೆ ಮಾಡಿದರು ಎಂಬ ಮಾಹಿತಿಯೇ ಇಲ್ಲ. ಪ್ರವಾಸೋದ್ಯಮದ ಹೆಸರಿನಲ್ಲಿ ಸಾರಿ ನಡೆಸುವ ಮೂಲಕ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳನ್ನು ನಾಶ ಮಾಡುತ್ತಿದ್ದಾರೆ. ಈ ಮೂಲಕ ರೈತರ ಜೀವದ ಮೇಲೆ ಚೆಲ್ಲಾಟವಾಡುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಚುಂಗಡಿ ಕರಿಯಪ್ಪ, ಬಂದಿಗೌಡನಹಳ್ಳಿ ನಟರಾಜು, ಬರಗಿ ಮಹೇಶ್, ಶಶಿ, ಶಾಂತಕುಮಾರ್, ಹಸಗೂಲಿ ಮಹೇಶ್, ಪಟ್ಟಸ್ವಾಮಿ, ನಕ್ಷತ್ರ, ಮೇರಿ, ಮಹದೇವಮ್ಮ ಹಾಗೂ ಇತರರು ಭಾಗವಹಿಸಿದ್ದರು.
ಅಕ್ರಮ ರೆಸಾರ್ಟ್ ತೆರವುಗೊಳಿಸಿ:
ಜಿಲ್ಲೆಯ ಪರಿಸರ ಸೂಕ್ಷ್ಮ ವಲಯ ಹಾಗೂ ಕಂದಾಯ ಇಲಾಖೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡು ತಾಂತ್ರಿಕವಾಗಿ ಎಲ್ಲಾ ರೀತಿಯಿಂದಲೂ ೋಷಿಸಲು ಸೂಕ್ತವಾಗಿರುವ ರೆಸಾರ್ಟ್‌ಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾ ಉಸ್ತವಾರಿ ಸಚಿವ ಕೆ.ವೆಂಕಟೇಶ್ ಅವರಲ್ಲಿ ಮನವಿ ಸಲ್ಲಿಸಿದರು. ಹನೂರು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲು ಕ್ರಮವಹಿಸಬೇಕು. ರೈತರ ಜಮೀನುಗಳಿಗೆ ಪೋಡು ಹಾಗೂ ದುರಸ್ತಿ ಮಾಡಿಸಿಕೊಡಬೇಕು. ಬೇಸಿಗೆ ಸಮಯ ಶುರುವಾಗಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ 07 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು. ಪ್ರಸ್ತುತ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಸಮಸ್ಯೆಗಳು ಉಂಟಾಗುತ್ತಿದೆ. ಆದ್ದರಿಂದ ಕಾಡಿನಲ್ಲಿರುವ ಪ್ರಾಣಿಗಳಿಗೆ ನೀರು ಪೂರೈಕೆ ಮಾಡಲು ಹೋಗಬಾರದು ಎಂದು ಒತ್ತಾಯಿಸಿದರು.
ೆ.25 ರಿಂದ ಅನಿರ್ದಿಷ್ಟಾವಧಿ ಧರಣಿ:
ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಾರಿ ಪುನರಾರಂಭ ಮಾಡಿರುವುದನ್ನು ಖಂಡಿಸಿ ೆ.25 ರಿಂದ ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ತಿಳಿಸಿದರು. ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆ ಸಾರಿಯನ್ನು ಮುಂದುವರಿಸಿದ್ದೇ ಆದರೆ ಮಾ.1 ಅಥವಾ 2 ರಿಂದ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಪ್ರತಿಕ್ರಿಯಿಸಿ, ಸಾರಿಯನ್ನು ನಿಲ್ಲಿಸುವಂತೆ ಅರಣ್ಯ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು ಅಥವಾ ಪ್ರಾಣಿಗಳು ಕಾಡಿನಿಂದ ಆಚೆ ಬರದಂತೆ ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ರೈತರು ಧರಣಿಯನ್ನು ತಾತ್ಕಾಲಿಕವಾಗಿ ಮುಂದೂಡಿದರು.
ರೈತರೊಂದಿಗೆ ಕುಳಿತ ಜಿಲ್ಲಾಧಿಕಾರಿ:
ಸಾಮೂಹಿಕ ರೈತಸಂಘದಿಂದ ನಡೆದ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಮನವಿ ಆಲಿಸಲು ಬಂದ ಜಿಲ್ಲಾಧಿಕಾರಿ ಶ್ರೀರೂಪಾ ಅವರು, ರೈತರೊಂದಿಗೆ ಕುಳಿತು ಸಮಸ್ಯೆಗಳನ್ನು ಆಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಹಾಗಾಗಿ ಸ್ಥಳೀಯವಾಗಿ ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಗಮನಕ್ಕೆ ತನ್ನಿ ಎಂದರು. ಹಲವಾರು ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳಿಗೆ ಕರೆಮಾಡಿ ಕೆಲವು ಸಮಸ್ಯೆಗಳನ್ನು ಬಗಹರಿಸುವಂತೆ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗುವುದು. ರೈತರು ಹೇಳುವುದರಲ್ಲಿ ಸರಿ ಇದ್ದು, ಅಕ್ರಮವಾಗಿ ರೆಸಾರ್ಟ್‌ಗಳನ್ನು ನಡೆಸಲು ಯಾರೇ ಆದರೂ ಅವಕಾಶ ನೀಡುವುದಿಲ್ಲ. ಸಾರಿ ಬಂದ್‌ಗೆ ಸಂಬಂಧಿಸಿದಂತೆ ಅರಣ್ಯ ಸಚಿವರು ಹಾಗೂ ಸಿಎಂ ಬಳಿ ಚರ್ಚಿಸಲಾಗುವುದು.
ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ, ಚಾಮರಾಜನಗರ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net