ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಆಶಾ ಕಾರ್ಯಕರ್ತರು ರಸ್ತೆತಡೆ ನಡೆಸಿದರು. ಉಮಾದೇವಿ, ಕವಿತಾ, ಭಾಗ್ಯ, ವಸಂತಾ, ಸಿದ್ದಮಣಿ, ಗೀತಾ, ಶಶಿಕಲಾ ಇನ್ನಿತರರಿದ್ದರು.
ಚಾಮರಾಜನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಆಶಾ ಕಾರ್ಯಕರ್ತರು ರಸ್ತೆತಡೆ ನಡೆಸಿದರು. ಉಮಾದೇವಿ, ಕವಿತಾ, ಭಾಗ್ಯ, ವಸಂತಾ, ಸಿದ್ದಮಣಿ, ಗೀತಾ, ಶಶಿಕಲಾ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಂದ ರಸ್ತೆತಡೆ
  • ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ
  • ಕನಿಷ್ಠ ವೇತನವನ್ನು ಜಾರಿಗೊಳಿಸುವಂತೆ ಒತ್ತಾಯ
ಚಾಮರಾಜನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಅಂಗನವಾಡಿ ನೌಕರರು ರಸ್ತೆತಡೆ ನಡೆಸಿದರು. ನಾಗಮಣಿ, ಶಾಹಿದಾ ಭಾನು, ಗುರುಲಿಂಗಮ್ಮ, ಕಾಂಚನ, ಶಾಂತ, ಗುರುಮಲ್ಲಮ್ಮ, ಸುಮಿತ್ರಾ, ದೇವಮ್ಮ ಇನ್ನಿತರರಿದ್ದರು.
ಚಾಮರಾಜನಗರ: ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರು ಹಾಗೂ ಆಶಾ ಕಾರ್ಯಕರ್ತರ ಸಂಘಟನೆಗಳ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು, ಶ್ರೀಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಬಂಡವಾಳಗಾರರ ಹಿತವನ್ನು ಕಪಾಡುವ ಉದ್ದೇಶದಿಂದ 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಕಾರ್ಮಿಕ ಸಂಹಿತೆಗಳಾಗಿ ಬದಲಾಯಿಸುವ ಮೂಲಕ ಕಾರ್ಮಿಕ ವಿರೋಧಿ ಧೋರಣೆಯನ್ನು ಅನುಸರಿಸಿದೆ. ಈ ನಾಲ್ಕು ಸಂಹಿತೆಗಳು ಜಾರಿಗೊಂಡರೆ ದೇಶದ ದುಡಿಯುವ ಜನರ ಬದುಕನ್ನು ವಿನಾಶಗೊಳಿಸಲಿದೆ. ಉದ್ಯೋಗದ ಭದ್ರತೆ ಮತ್ತು ಕಾರ್ಮಿಕರ ಹೋರಾಟದ ಹಕ್ಕನ್ನು ಕಿತ್ತುಕೊಳ್ಳಲಿದೆ ಎಂದು ದೂರಿದರು.
ಅಂಗನವಾಡಿ ನೌಕರರಿಗೆ ದ್ರೋಹವನ್ನು ಬಗೆದ 4 ಕಾರ್ಮಿಕ ಸಂಹಿತೆಗಳು ರದ್ದಾಗಬೇಕು. ಶಿಕ್ಷಣ ಇಲಾಖೆ ಎಲ್‌ಕೆಜಿ, ಯುಕೆಜಿ ನಡೆಸುವುದನ್ನು ನಿಲ್ಲಿಸಿ ಅಂಗನವಾಡಿ ಕೇಂದ್ರಗಳಲ್ಲೇ ನಡೆಸಬೇಕು. ಶಾಸನ ಸವಲತ್ತುಗಳನ್ನು ನೀಡದ ಶ್ರಮಶಕ್ತಿ ನೀತಿ ರದ್ದಾಗಬೇಕು. ಅಂಗನವಾಡಿ ನೌಕರರಿಗೂ ಮುಟ್ಟಿನ ರಜೆ ನೀಡಬೇಕು. 56 ಲಕ್ಷ ಸ್ಕೀಮ್ ಕಾರ್ಮಿಕರ ಸೇವಾ ಷರತ್ತುಗಳ ಸುಧಾರಣೆಗೆ ಪ್ರತ್ಯೇಕ ವೇತನ ಆಯೋಗ ರಚಿಸಬೇಕು. ಐಸಿಡಿಎಸ್ ಯೋಜನೆಯನ್ನು ಖಾಯಂಗೊಳಿಸಬೇಕು. 2018 ಲಾನುಭವಿಗಳ ಘಟಕ ವೆಚ್ಚ ಹೆಚ್ಚಳ ಮಾಡಬೇಕು. ಕೇಂದ್ರ ಸರ್ಕಾರ ಕೂಡಲೇ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಎ್ಆರ್‌ಎಸ್ ರದ್ದುಮಾಡಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಂದ ಬಿಡುಗಡೆಗೊಳಿಸಬೇಕು. ಅಂಗನವಾಡಿ ನೌಕರರನ್ನು 3 ಮತ್ತು 4 ನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು. ನೌಕರರನ್ನು ಖಾಯಂಗೊಳಿಸುವವರೆಗೂ 26 ಸಾವಿರ ರೂ, ಕನಿಷ್ಠ ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ನಾಗಮಣಿ, ಪ್ರಧಾನ ಕಾರ್ಯದರ್ಶಿ ಶಾಹಿದಾ ಭಾನು, ಖಜಾಂಚಿ ಗುರುಲಿಂಗಮ್ಮ, ಕಾಂಚನ, ಶಾಂತ, ಗುರುಮಲ್ಲಮ್ಮ, ಸುಮಿತ್ರಾ, ದೇವಮ್ಮ ಹಾಗೂ ಇತರರು ಭಾಗವಹಿಸಿದ್ದರು.
ಆಶಾ ಕಾರ್ಯಕರ್ತರಿಂದಲೂ ರಸ್ತೆತಡೆ:
ಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಶಾ ಕಾರ್ಯಕರ್ತರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಕರ್ತವ್ಯ ನಿರ್ವಹಿಸುವ ಆಶಾ ಕಾರ್ಯಕರ್ತರಿಗೆ ಸರ್ಕಾರಿ ನೌಕರರ ಸ್ಥಾನಮಾನವನ್ನು ನೀಡಬೇಕು. ಐಎಲ್‌ಒ ಶಿಾರಸಿನಂತೆ ಕನಿಷ್ಠ ವೇತನ ಮತ್ತು ನಿವೃತ್ತಿ ಪರಿಹಾರಗಳನ್ನು ಒದಗಿಸಬೇಕು. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನ, ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷೆ ಉಮಾದೇವಿ, ಆಶಾ ಕಾರ್ಯಕರ್ತರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ಪದಾಧಿಕಾರಿಗಳಾದ ಭಾಗ್ಯ, ವಸಂತಾ, ಸಿದ್ದಮಣಿ, ಗೀತಾ, ಶಶಿಕಲಾ ಹಾಗೂ ಇತರರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net