ಚಾಮರಾಜನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯೋಗೇಂದ್ರ, ಚಂದನ್, ಅಕ್ಷಯ್ ಕುಮಾರ್, ಶ್ರೀನಿವಾಸ್‌ಶೆಟ್ಟಿ, ಅನಂತ್, ಸಚಿನ್, ಮನು, ದರ್ಶನ್ ಇನ್ನಿತರರಿದ್ದರು.
ಎಫ್ಸಿಟೀನ್ ೈಲ್‌ನಲ್ಲಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖ ಹಿನ್ನೆಲೆ
ಶ್ರೀಭವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು, ಶ್ರೀಭವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೇಂದ್ರ ಮಾತನಾಡಿ, ಅಮೇರಿಕಾದ ಲೈಂಗಿಕ ಅಪರಾಧಿ ಜೆಫ್ರಿ ಎಫ್ಸಿಟೀನ್ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡು, ವಿವಿಧ ದೇಶಗಳ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಒಡನಾಟವನ್ನು ಹೊಂದಿದ್ದನು. ಅಮೇರಿಕಾದಲ್ಲಿ ಎಫ್ಸಿಟೀನ್ ೈಲ್ ಸಾಕಷ್ಟು ಸದ್ದುಮಾಡುತ್ತಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಕೇಳಿ ಬಂದಿರುವುದು ದೇಶವೇ ತಲೆತಗ್ಗಿಸುವಂತಹ ಕೃತ್ಯವಾಗಿದೆ ಎಂದು ದೂರಿದರು.
ಪ್ರಧಾನಿ ನರೇಂದ್ರಮೋದಿ ಅವರು ಅಮೇರಿಕಾ ಅಧ್ಯಕ್ಷ ಟ್ರಂಪ್ ಅವರ ಕೈಗೊಂಬೆಯಾಗಿದ್ದಾರೆ. ಅವರನ್ನು ಮೆಚ್ಚಿಸುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಎಫ್ಸಿಟೀನ್ ೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಚಂದನ್, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಕ್ಷಯ್ ಕುಮಾರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಶ್ರೀನಿವಾಸ್‌ಶೆಟ್ಟಿ, ಅನಂತ್, ಸಚಿನ್, ಮನು, ದರ್ಶನ್ ಹಾಗೂ ಇತರರು ಭಾಗವಹಿಸಿದ್ದರು.