ವೈಜ್ಞಾನಿಕ ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹಳ್ಳಿಕೆರೆಹುಂಡಿ, ಕೆರೆಹುಂಡಿ ರಾಜಣ್ಣ, ಹಾಲಿನ ನಾಗರಾಜ್, ಅಡ್ಡುವಿನಹಳ್ಳಿ ಎಚ್.ಎಸ್.ರಾಜು, ಗಣೇಶ್, ಮಲಿಯೂರು ಮಹೇಂದ್ರ, ಸತೀಶ್ ನರಸುಮಂಗಲ, ನಾಗು ಇನ್ನಿತರರಿದ್ದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹಳ್ಳಿಕೆರೆಹುಂಡಿ, ಕೆರೆಹುಂಡಿ ರಾಜಣ್ಣ, ಹಾಲಿನ ನಾಗರಾಜ್, ಅಡ್ಡುವಿನಹಳ್ಳಿ ಎಚ್.ಎಸ್.ರಾಜು, ಗಣೇಶ್, ಮಲಿಯೂರು ಮಹೇಂದ್ರ, ಸತೀಶ್ ನರಸುಮಂಗಲ, ನಾಗು ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಬ್ಬು ಬೆಳೆಗಾರರ ಸಂಘದ ವತಿಯಿಂದ ಧರಣಿ
  • ಜಂಟಿ ಸರ್ವೆ ನಡೆಸುವಂತೆ ಒತ್ತಾಯ
  • ಬೆಳೆನಷ್ಟ ರೈತರ ಸಾಲಮನ್ನಾ ಮಾಡುವಂತೆ ಆಗ್ರಹ
ಚಾಮರಾಜನಗರ: ಇತ್ತೀಚೆಗೆ ಉಂಟಾದ ಅಕಾಲಿಕ ಆಲಿಕಲ್ಲು ಮಳೆಗೆ ಉಂಟಾಗಿರುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರವನ್ನು ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ವಿವಿಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಜಿಲ್ಲೆಯಲ್ಲಿ ಇತ್ತೀಚೆಗೆ ಅಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ತೋಟಗಾರಿಕೆ ಬೆಳೆಗಳಾದ ಬಾಳೆ, ಈರುಳ್ಳಿ, ಕಲ್ಲಂಗಡಿ, ಪಪ್ಪಾಯಿ, ಅರಿಶಿಣ, ಮೆಣಸಿನಕಾಯಿ, ಸೌತೆಕಾಯಿ ಹಾಗೂ ಇನ್ನಿತರೆ ಬೆಳೆಗಳು ಹಾನಿಯಾಗಿದೆ. ಈ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಳೆ ನಷ್ಟವನ್ನು ಸರ್ಕಾರ ಘೋಷಣೆ ಮಾಡಬೇಕು. ಜಿಲ್ಲೆಯಲ್ಲಿ ನೂರಾರು ಹೆಕ್ಟರ್ ಪ್ರದೇಶದಲ್ಲಿ ಬೆಳೆಗಳು ನಷ್ಟವಾಗಿದೆ. ಈ ನಷ್ಟವನ್ನು ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಳೆ ನಷ್ಟವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಬೆಳೆ ನಷ್ಟ ಆಗಿದ್ದರೂ ಕೂಡ ಸಂಬಂಧಪಟ್ಟಂತ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರಾಗಲಿ ಸ್ಥಳವನ್ನು ಭೇಟಿ ಮಾಡಿ ಪರಿಶೀಲನೆ ಮಾಡದೆ ಉಪಚುನಾವಣೆಯ ಗುಂಗಿನಲ್ಲಿ ನಿರತರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎನ್‌ಡಿಆರ್‌ಎ್ ಮತ್ತು ಎಸ್‌ಡಿಆರ್‌ಎ್ ಮಾನದಂಡದಂತೆ ಒಂದು ಹೆಕ್ಟೇರ್ ಪ್ರದೇಶ ಬೆಳೆನಷ್ಟಕ್ಕೆ ಕೇವಲ 17 ಸಾವಿರ ರೂ, ನೀಡುತ್ತಿದೆ. ಈ ಪರಿಹಾರ ಯಾವುದಕ್ಕೂ ಸಾಲದಂತಾಗಿದೆ. ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಬೆಳೆನಷ್ಟವನ್ನು ನೀಡಬೇಕು ಎಂದು ಆಗ್ರಹಿಸಿದರು.
ಸದರಿ ಬೆಳೆ ನಷ್ಟ ಉಂಟಾಗಿರುವ ರೈತರ ಕೃಷಿ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು. ಲೋಕಸಭಾ ಸದಸ್ಯರು ಇದು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿಸಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಮೂಲಕ ನಷ್ಟ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆರೆಹುಂಡಿ ರಾಜಣ್ಣ, ಹಾಲಿನ ನಾಗರಾಜ್, ಅಡ್ಡುವಿನಹಳ್ಳಿ ಎಚ್.ಎಸ್.ರಾಜು, ಗಣೇಶ್, ಮಲಿಯೂರು ಮಹೇಂದ್ರ, ಸತೀಶ್ ನರಸುಮಂಗಲ, ನಾಗು, ಪ್ರಕಾಶ್ ಗಾಂಧಿ, ಚಿದಂಬರ್, ಊರದಹಳ್ಳಿ ರಾಮಣ್ಣ, ಬಸವರಾಜು, ನಾಗರಾಜಪ್ಪ, ಮುಕಡಹಳ್ಳಿ ರಾಜು, ಪುಟ್ಟಮಲ್ಲೇಗೌಡ ಹಾಗೂ ಇತರರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net