ಈ ವೇಳೆ ಮಹಿಳೆಯರು ಮಾತನಾಡಿ, ಗ್ರಾಮದಲ್ಲಿ ಬಡತನಕ್ಕೆ ಸೇರಿದ ಹೆಚ್ಚಿನ ಕುಟುಂಬಗಳು ಕೂಲಿಯನ್ನೇ ನಂಬಿಕೊಂಡು ಜೀವನವನ್ನು ಸಾಗಿಸುತ್ತಿದ್ದೇವೆ. ಆದರೆ ಗ್ರಾಮದಲ್ಲಿ ಕಳೆದ ಹಲವು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಖಾಸಗಿ ಪಂಪ್‌ಸೆಟ್ ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಸಾಲುತ್ತಿಲ್ಲ. ಸಮರ್ಪಕ ನೀರು ಪೂರೈಕೆ ಮಾಡುವಂತೆ ಗ್ರಾಪಂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಯಾವುದೇ ಕ್ರಮವಹಿಸಿಲ್ಲ. ಇದರಿಂದ ಕುಡಿವ ನೀರಿಗಾಗಿ ಕೆಲಸ ಕಾರ್ಯವನ್ನು ಬಿಟ್ಟು ಬಿಂದಿಗೆ ಹಿಡಿದು ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಸಮಸ್ಯೆಯಿಂದ ಮಕ್ಕಳನ್ನು ನಿಗದಿತ ಸಮಯಕ್ಕೆ ಶಾಲೆಗೆ ಕಳುಹಿಸಲು ತೊಡುಕಾಗಿ ಪರಿಣಮಿಸಿದೆ. ಇದರಿಂದ ಗ್ರಾಮದಲ್ಲಿ ಕುಡಿವ ನೀರಿನದ್ದೇ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಗ್ರಾಮಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದು ಎಚ್ಚರಿಸಿದರು.