ಮಾನವ ಅಭಿವೃದ್ಧಿಯಲ್ಲಿ ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ಕೌಶಲ್ಯಾಭಿವೃದ್ಧಿ, ಕೈಗಾರಿಕೆ, ಉದ್ಯೋಗಸೃಷ್ಠಿ, ಮೂಲಸೌಕರ್ಯ, ಪೌಷ್ಠಿಕ ಆಹಾರ, ಆದಾಯ ಸೇರಿದಂತೆ ಇತರೆ ಅಂಕಿ ಅಂಶಗಳನ್ನು ಪರಿಗಣಿಸಲಾಗುತ್ತಿದೆ. ವರದಿಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ಅಧಿಕಾರಿಗಳು ನಿಖರ ಮಾಹಿತಿ ಒದಗಿಸಬೇಕು. ಯಾವುದೇ ನಿರ್ಲಕ್ಷ್ಯ ವಹಿಸದೇ ನಿಗದಿತ ಕಾಲಮಿತಿಯಲ್ಲಿ ಮಾಹಿತಿ ನೀಡಬೇಕು. ಉತ್ತಮ ಮಾಹಿತಿ ಸಲ್ಲಿಕೆಯಿಂದ ಸಾಮಾಜಿಕ, ಪ್ರಾದೇಶಿಕ ಅಸಮಾನತೆ ತಡೆಯಬಹುದಾಗಿದೆ ಎಂದರು.