ಕಳೆದ ಹಲವಾರು ವರ್ಷಗಳಿಂದಲೂ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಚಿನ್ನಾಭರಣಗಳನ್ನು ನಾವು ನೋಡಿಲ್ಲ. ಈ ಸಂಬಂಧ ಮುಜರಾಯಿ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೇ, ಚಿನ್ನಾಭರಣಗಳೆಲ್ಲವೂ ಖಜಾನೆಯಲ್ಲಿ ಇದೆ ಎಂಬ ಉತ್ತರ ನೀಡುತ್ತಾರೆ. ಈ ಸಂಬಂಧ ಹಲವು ಅನುಮಾನಗಳು ಮೂಡುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚಿನ್ನಾಭರಣಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.