ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರಂ ಮಾತನಾಡಿ, 6 ವರ್ಷದ ಒಳಗಿನ ಎಲ್ಲ ಮಕ್ಕಳನ್ನು ತಪಾಸಣೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ಹಾಗೂ ಸಲಹೆ ಪಡೆದುಕೊಂಡು ಆರೋಗ್ಯವಂತ ಜೀವನ ನಡೆಸುವಂತೆ ಮಾಡಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂಪಾಶಾ ಮಾತನಾಡಿ, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನೆರವಿನಿಂದ ಪ್ರಯಾಸ್ ಕಾರ್ಯಕ್ರಮದಡಿ ಆರು ವರ್ಷದೊಳಗಿನ ಮಕ್ಕಳ ತಪಾಸಣೆ ಕಾರ್ಯಕ್ರಮದಲ್ಲಿ 147 ಮಕ್ಕಳ ತಪಾಸಣೆಯನ್ನು ಮಾಡಲಾಯಿತು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಡಾ.ಹರೀಶ್, ಡಾ.ಶಾಶ್ವತ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿ ಸುದರ್ಶನ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ರೇಣುಕಾದೇವಿ, ಸವಿತಾ, ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.