ಶಾಲೆಯ ಮುಖ್ಯ ಶಿಕ್ಷಕ ಚಿಂದಬರ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳು ನಮ್ಮ ಸಂಸ್ಕೃತಿ ಅರಿಯುವ ಸಲುವಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಹೊಸ ಹುಮ್ಮಸ್ಸು ತುಂಬುತ್ತವೆ. ಇಂತಹ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನವಾಗಲಿದೆ ಎಂದರು. ರಾಧೆ, ಕೃಷ್ಣರ ವೇಷದಲ್ಲಿ ಮಕ್ಕಳು ಕಂಗೊಳಿಸಿದರು. ಶಿಕ್ಷಕಿ ಸೌಮ್ಯಾ, ಸಿಬ್ಬಂದಿ ಇದ್ದರು.