ಮಕ್ಕಳಿಗೆ ಶಿಕ್ಷಣ, ವಸತಿ, ಆರೋಗ್ಯ ಹಾಗೂ ಸಾರ್ವಜನಿಕರ ಸ್ಥಳಗಳಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಮಕ್ಕಳು ನಿಗಾವಹಿಸಿ ಇವುಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ತಕ್ಷಣ ಮಾಹಿತಿ ನೀಡಬೇಕು. ಜತೆಗೆ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಹಿಂದಿ, ಇಂಗ್ಲಿಷ್ ಬೋಧನ ಶಿಕ್ಷಕರ ಕೊರತೆಯು ಹೆಚ್ಚಾಗಿ ಕಂಡು ಬಂದಿದ್ದು, ಇದರಿಂದ ಕಲಿಕೆಯಲ್ಲಿ ಹಿಂದೇಟು ಆಗುತ್ತಿದೆ. ಈ ಬಗ್ಗೆ ಸರಿಪಡಿಸಬೇಕೆಂದು ಮಕ್ಕಳು ಆಗ್ರಹಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಪ್ರಾಂಶುಪಾಲ ನಂಜುಂಡಯ್ಯ, ಶಿಕ್ಷಕ ವರ್ಗಾಹಣೆ ನಡೆದ ಹಿನ್ನೆಲೆಯಲ್ಲಿ ಕೆಲವು ಕಡೇ ಭಾಷೆ ಶಿಕ್ಷಕರ ಕೊರತೆ ಕಂಡು ಬಂದಿದ್ದು, ಇದನ್ನು ಸರಿಪಡಿಸುವ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.