ಹನೂರಿನಲ್ಲಿ ಮಾನಸ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ಪ್ರತಿಯನ್ನು ಡಾ.ಎಸ್.ದತ್ತೇಶ್ ಕುಮಾರ್ ವಿತರಿಸಿದರು.
ಮಾನಸ ಶಿಕ್ಷಣ ಸಂಸ್ಥೆ ವತಿಯಿಂದ ಶನಿವಾರ ಹನೂರಿನಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 33 ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ಪ್ರತಿಯನ್ನು ವಿತರಿಸಲಾಯಿತು.
ಈ ಮೇಳದಲ್ಲಿ 60ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಿದ್ದವು. ಹನೂರು, ಕೊಳ್ಳೇಗಾಲ ಹಾಗೂ ಇನ್ನಿತರ ಕಡೆಗಳಿಂದ ಆಗಮಿಸಿದ್ದ 940 ಉದ್ಯೋಕಾಂಕ್ಷಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದರು. ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಡೆದ ಸಂದರ್ಶನದಲ್ಲಿ ವಿವಿಧ ಕಂಪನಿಗಳಿಗೆ ಆಯ್ಕೆಯಾದ 33 ವಿದ್ಯಾರ್ಥಿಗಳಿಗೆ ಡಾ.ಎಸ್.ದತ್ತೇಶ್ ಕುಮಾರ್ ಅವರು ನೇಮಕಾತಿ ಆದೇಶ ಪ್ರತಿಯನ್ನು ವಿತರಿಸಿದರು.