ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ

ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಶೈಲೇಂದ್ರ ಅವರ ನೇತೃತ್ವದಲ್ಲಿ ಹನೂರು ರೈತರ ತಂಡ ಸಚಿವರಾದ ಕೃಷ್ಣ ಭೈರೇಗೌಡ, ಕೆ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿತು. ರಾಜಶೇಖರ್, ಅರ್ಪುದರಾಜ್, ಲೂರ್ದುಸ್ವಾಮಿ, ಪೀಟರ್ ಇದ್ದರು.
ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಶೈಲೇಂದ್ರ ಅವರ ನೇತೃತ್ವದಲ್ಲಿ ಹನೂರು ರೈತರ ತಂಡ ಸಚಿವರಾದ ಕೃಷ್ಣ ಭೈರೇಗೌಡ, ಕೆ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿತು. ರಾಜಶೇಖರ್, ಅರ್ಪುದರಾಜ್, ಲೂರ್ದುಸ್ವಾಮಿ, ಪೀಟರ್ ಇದ್ದರು.
Published on
ಹನೂರು: ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶನಿವಾರ ಹನೂರು ರೈತರ ತಂಡ ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ವೇಳೆ ಶೈಲೇಂದ್ರ ಮಾತನಾಡಿ, ಸಮರ್ಪಕ ಮಳೆಯಾಗದ ಪರಿಣಾಮ ತಾಲೂಕಿನ ಶೆಟ್ಟಳ್ಳಿ, ಕುರಟ್ಟಿ ಹೊಸೂರು ಹಾಗೂ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕೃಷಿ ಹಾಗೂ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದೆ. ದಂಟಳ್ಳಿ ಸಮೀಪದಲ್ಲಿ ಹರಿಯುತ್ತಿರುವ ಕಾವೇರಿ ನದಿಯಿಂದ ಏತ ನೀರಾವರಿ ಯೋಜನೆ ರೂಪಿಸುವಂತೆ ಒತ್ತಾಯಿಸಿ 104 ದಿನಗಳಿಂದಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಯಾವುದೇ ಕ್ರಮವಾಗಿಲ್ಲ. ಇನ್ನು ಸರ್ಕಾರ ರೈತರಿಗೆ ಜಮೀನು ನೀಡಿ 55 ವರ್ಷ ಕಳೆದಿದೆ. ರೈತರು ಸಾಗುವಳಿ ಮಾಡುತ್ತಿದ್ದಾರೆ. ಆದರೆ, ಇನ್ನು ಪೋಡಿ ಆಗಿಲ್ಲ. ಬಗರ್ ಹುಕುಂ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಗಮನಹರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.
ಇದಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯಿಸಿ, ಸಾಗುವಳಿ ಜಮೀನು ಪೋಡಿಯಾಗುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದರೆ, ಅರಣ್ಯ ಇಲಾಖೆಯಲ್ಲಿ ಸಮಸ್ಯೆ ಇದ್ದು, ಈ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ. ಬಗರ್ ಹುಕುಂ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು. ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಚರ್ಚಿಸಿ ನೀರಾವರಿ ಸೌಕರ್ಯಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಆದ್ದರಿಂದ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಇದಕ್ಕೆ ರೈತರು ನೀರಾವರಿ ಯೋಜನೆ ರೂಪಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದರು.
ಕೊಳ್ಳೇಗಾಲ ಅಂಬೇಡ್ಕರ್ ಅಧ್ಯಯನ ಕೇಂದ್ರದ ಕಾರ್ಯದರ್ಶಿ ರಾಜಶೇಖರ್, ರೈತ ಮುಖಂಡರಾದ ಅರ್ಪುದರಾಜ್, ಲೂರ್ದುಸ್ವಾಮಿ, ಬಸವರಾಜು, ಪೀಟರ್, ಆರೋಗ್ಯ ರಾಜ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net