ಕುದೇರು ಉಪ ನೋಂದಣಾಧಿಕಾರಿ ಕಚೇರಿ ಕಟ್ಟಡಕ್ಕೆ 1 ಕೋಟಿ ರೂ.

ಎ.ಆರ್.ಕೃಷ್ಣಮೂರ್ತಿ
ಎ.ಆರ್.ಕೃಷ್ಣಮೂರ್ತಿ
Published on

ಚಾಮರಾಜನಗರ:

ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿ ಶಿಥಿಲಾವಸ್ಥೆಯಲ್ಲಿರುವ ಕಾರಣ 4 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿ, ಈ ಕಟ್ಟಡ 1930ರಲ್ಲಿ ನಿರ್ಮಾಣವಾಗಿದ್ದು, ಪ್ರಸ್ತುತ ಶಿಥಿಲಾವಸ್ಥೆಯಲ್ಲಿರುವ ಕಾರಣ ಕಳೆದ 4 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಪಂಚಾಯಿತಿ ಕೇಂದ್ರವಾಗಿದ್ದು, ಪ್ರತಿದಿನ ನೂರಾರು ಸಾರ್ವಜನಿಕರು ನೋಂದಣಿ ಕಾರ್ಯಗಳಿಗಾಗಿ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಅನುದಾನವನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಕಂದಾಯ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಮಾ.6ರಲ್ಲಿ ಕುದೇರು ಗ್ರಾಮದ ಉಪ ನೋಂದಣಾಧಿಕಾರಿ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು 1 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಅಂದಾಜು ಪಟ್ಟಿಗೆ ಮೇ 22ರಂದು ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು, ಕರ್ನಾಟಕ ಗೃಹ ಮಂಡಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿ ವತಿಯಿಂದ ಟೆಂಡರ್ ನೀಡುವ ಪ್ರಕ್ರಿಯೆ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net