ಪ್ರೇರಣಾ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ಚಾಮರಾಜನಗರ ತಾಲೂಕಿನ ಅಂಕನಶೆಟ್ಟಿಪುರ ಗ್ರಾಮದ ಪ್ರೇರಣಾ ವಿದ್ಯಾ ಸಂಸ್ಧೆಯಲ್ಲಿ ಶನಿವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ನಟರಾಜು, ಶಮಿತ್‌ಕುಮಾರ್, ಶಿವಸ್ವಾಮಿ ಮತ್ತು ಇತರರು ಹಾಜರಿದ್ದರು.
ಚಾಮರಾಜನಗರ ತಾಲೂಕಿನ ಅಂಕನಶೆಟ್ಟಿಪುರ ಗ್ರಾಮದ ಪ್ರೇರಣಾ ವಿದ್ಯಾ ಸಂಸ್ಧೆಯಲ್ಲಿ ಶನಿವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ನಟರಾಜು, ಶಮಿತ್‌ಕುಮಾರ್, ಶಿವಸ್ವಾಮಿ ಮತ್ತು ಇತರರು ಹಾಜರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Science exhibition
ಹರದನಹಳ್ಳಿ: ತಾಲೂಕಿನ ಅಂಕನಶೆಟ್ಟಿಪುರ ಗ್ರಾಮದಲ್ಲಿರುವ ಪ್ರೇರಣಾ ವಿದ್ಯಾ ಸಂಸ್ಧೆಯಲ್ಲಿ ಶನಿವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಮಾದರಿಗಳನ್ನು ತಯಾರಿಸಿ ಗಮನ ಸೆಳೆದರು.
ವಸ್ತುಪ್ರದರ್ಶನ ವೀಕ್ಷಿಸಲು ಆಗಮಿಸಿದ್ದ ಪಾಲಕರು ಮತ್ತು ಗ್ರಾಮಸ್ಥರಿಗೆ ವಿದ್ಯಾರ್ಥಿಗಳು ಮಾದರಿಗಳ ವಿವರಣೆ ನೀಡಿದರು. ಇದೇ ವೇಳೆ ವಿಜ್ಞಾನ ಶಿಕ್ಷಕ ನಟರಾಜು ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ಸೃಜನಾತ್ಮಕ ಕಲೆಯನ್ನು ಕಲಿಸುತ್ತದೆ. ವಿಜ್ಞಾನದ ಆವಿಷ್ಕಾರಗಳು ಹೊಸ ಕುತೂಹಲಗಳನ್ನು ಮೂಡಿಸಿ ಸ್ವ ಅನುಭವವನ್ನುಂಟು ಮಾಡುತ್ತದೆ ಎಂದು ಹೇಳಿದರು.
ರೋಟರಿ ಸಂಸ್ಥೆಯ ಶಮಿತ್ ಕುಮಾರ್ ಮಾತನಾಡಿ, ವಿಜ್ಞಾನದ ಆವಿಷ್ಕಾರ ಕಾರ್ಯಕ್ರಮಗಳು ಶಾಲಾ ಹಂತದಲ್ಲಿ ನಡೆಯುವುದರಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡುತ್ತದೆ ಎಂದರು. ಸಂಸ್ಧೆಯ ಕಾರ್ಯದರ್ಶಿ ಶಿವಸ್ವಾಮಿ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net