ಗುಂಡ್ಲುಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮೂರು ನಮ್ಮ ಕೆರೆ ಕಾಮಗಾರಿಯಡಿ ಬಂಡೀಪುರದ ಬೆಟ್ಟದ ಕಟ್ಟೆ ಕೆರೆಯ ಹೂಳೆತ್ತುವ ಕಾಮಗಾರಿಗೆ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ ಚಾಲನೆ ನೀಡಿದರು.
ಬಂಡೀಪುರ ಅರಣ್ಯ ಪ್ರದೇಶದ ಈ ಕೆರೆಯಿಂದ ವನ್ಯಜೀವಿಗಳು, ಪ್ರಾಣಿ-ಪಕ್ಷಿ ಗಳಿಗೆ ಕುಡಿಯುವ ನೀರು ದೊರಕುತ್ತದೆ. ಇದರಿಂದಾಗಿ ಪ್ರಾಣಿಗಳು ಕಾಡಿನಿಂದ ಹೊರಬರುವುದು ತಪ್ಪುವುದರಿಂದ ಕಾಡಿನಿಂದ ಗ್ರಾಮಗಳಲ್ಲಿ ಮಾನವ ವನ್ಯಜೀವಿಗಳ ಸಂಘರ್ಷ ತಪ್ಪಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪವಲಯಾರಣ್ಯಾಧಿಕಾರಿ ಜಗದೀಶ್, ಜಿಲ್ಲಾ ನಿರ್ದೇಶಕ ದಿನೇಶ್, ಪ್ರಾದೇಶಿಕ ವ್ಯಾಪ್ತಿಯ ಕೆರೆ ಇಂಜಿನಿಯರ್ ಪುಷ್ಪರಾಜ್, ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್, ಕೃಷಿ ಮೇಲ್ವಿಚಾರಕ ಸುಬ್ರಹ್ಮಣ್ಯ ಹಾಗೂ ಇತರರು ಇದ್ದರು.