ರಾಜ್ಯ ಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆ

ಡಿ.ಸಂಗೀತಾ, ಎಚ್.ಎಸ್.ವಿದ್ಯಾ
ಡಿ.ಸಂಗೀತಾ, ಎಚ್.ಎಸ್.ವಿದ್ಯಾ
Published on

ಪ್ರಮುಖ ಮುಖ್ಯಾಂಶಗಳು

  • ಹುಂಡಿಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ಎಸ್.ವಿದ್ಯಾ
  • ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಡಿ.ಸಂಗೀತಾ
ಗುಂಡ್ಲುಪೇಟೆ: ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ ಇಬ್ಬರು ವಿದ್ಯಾರ್ಥಿಗಳು, ರಾಜ್ಯ ಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಹುಂಡಿಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ಎಸ್.ವಿದ್ಯಾ ಮತ್ತು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಡಿ.ಸಂಗೀತಾ ಇವರು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ಭಾರತ ಸರ್ಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಆಯೋಜಿಸಿದ್ದ 2023-24ನೇ ಸಾಲಿನ ಜಿಲ್ಲಾಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹುಂಡಿಪುರ ಶಾಲೆಯ ಭೌತವಿಜ್ಞಾನ ಶಿಕ್ಷಕ ವೆಂಕಟೇಶ್ ಮತ್ತು ಬಾಲಕಿಯರ ಪ್ರೌಢಶಾಲೆಯ ಜೀವ ವಿಜ್ಞಾನ ಶಿಕ್ಷಕಿ ಎಸ್.ಆರ್.ಕುಮುದವಲ್ಲಿ ಅವರು ಮಾರ್ಗದರ್ಶನದಲ್ಲಿ ಜಿಲ್ಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net