ಬಡಾವಣೆಯ ಚರಂಡಿಯಲ್ಲಿ ಹೂಳು ತುಂಬಿದ್ದು, ಕೊಳಚೆ ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರುವುದರ ಮೂಲಕ ಅನೈರ್ಮಲ್ಯ ಮನೆ ಮಾಡಿದೆ. ಹೂಳು ತೆಗೆಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮವಾಗಿರಲಿಲ್ಲ. ಇದರ ಪರಿಣಾಮ ಸಂಜೆ ಸುರಿದ ಮಳೆಗೆ ಚರಂಡಿಯಲ್ಲಿನ ಕೊಳಚೆ ನೀರು ರಸ್ತೆ ಮೇಲೆ ಹರಿಯುವಂತಾಯಿತು. ಜತೆಗೆ ಕಸ, ಕಡ್ಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ರಸ್ತೆಯ ಮೇಲೆ ಹರಡಿದೆ. ರಸ್ತೆಮೇಲೆ ಸಂಚರಿಸಲು ಕಿರಿಕಿರಿ ಅನುಭವಿಸುವಂತಾಗಿದೆ. ಹೂಳು ತೆಗೆಸಲು ನಿರ್ಲಕ್ಷ್ಯ ವಹಿಸಿರುವ ಗ್ರಾಪಂ ಕಾರ್ಯವೈಖರಿಗೆ ಬಗ್ಗೆ ನಿವಾಸಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಸ್ತೆ ಮೇಲೆ ಹರಡಿರುವ ತ್ಯಾಜ್ಯವನ್ನು ತೆರೆವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.