ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಿಸಿರುವುದನ್ನು ಖಂಡಿಸಿ ಹನೂರಿನಲ್ಲಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ ನಡೆಯಿತು. ಆರ್.ನರೇಂದ್ರ, ಎಸ್. ನಾರಾಯಣ್, ಪ್ರಸಾದ್, ಮಾದೇಶ್ ಇತರರಿದ್ದರು.
ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಿಸಿರುವುದನ್ನು ಖಂಡಿಸಿ ಹನೂರಿನಲ್ಲಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ ನಡೆಯಿತು. ಆರ್.ನರೇಂದ್ರ, ಎಸ್. ನಾರಾಯಣ್, ಪ್ರಸಾದ್, ಮಾದೇಶ್ ಇತರರಿದ್ದರು.
Published on
ಹನೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ ವೇದಿಕೆ ಸ್ಥಳವನ್ನು ಶುದ್ಧೀಕರಣ ಮಾಡಿದ್ದನ್ನು ಖಂಡಿಸಿ ಶನಿವಾರ ಮಾಜಿ ಶಾಸಕ ಆರ್.ನರೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ನೆರೆದಿದ್ದ ಕಾರ್ಯರ್ತರು, ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಆರ್.ನರೇಂದ್ರ ಮಾತನಾಡಿ, ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಹೋಮ, ಹವನ ನಡೆಸಿ ಶುದ್ಧೀಕರಣ ಮಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ತಲೆ ತಗ್ಗಿಸುವ ವಿಚಾರ ಎಂದು ಖಂಡಿಸಿದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಅಸ್ಪಶ್ಯತೆ ಆಚರಿಸಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯಸಭೆ, ಲೋಕಸಭೆಯಲ್ಲಿ ಚರ್ಚಿಸಲಾಗಿದೆ. ಆದರೆ ಸಂಬಂಧಪಟ್ಟವರ ವಿರುದ್ಧ ಯಾವುದೇ ಕ್ರಮವಾಗಿಲ್ಲ. ಇದನ್ನು ಪ್ರಶ್ನಿಸಿದ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆಯೇ ಎಫ್‌ಐಆರ್ ದಾಖಲಿಸಿರುವುದು ಎಷ್ಟರ ಮಟ್ಟಿಗೆ ಸರಿ? ಆದ್ದರಿಂದ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಚಾರ ಸಮಿತಿ ಜಿಲ್ಲಾ ಉಸ್ತುವಾರಿ ಎಸ್.ನಾರಾಯಣ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಕಾರ್ಯಕರ್ತರಾದ ಸಿಂಗಾನಲ್ಲೂರು ಪ್ರಸಾದ್, ಚೇತನ್, ಸಂಜಯ್, ರಾಜೇಶ್, ಕೆಂಪರಾಜು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net