ಲಿಂಗತ್ವ ಅಲ್ಪಸಂಖ್ಯಾತರಲ್ಲಿ ಎಸ್‌ಐಆರ್ ಜಾಗೃತಿ

ಚಾಮರಾಜನಗರದ ಸಮತಾ ಸೊಸೈಟಿ ಸಂಸ್ಥೆಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಲಿಂಗತ್ವ ಅಲ್ಪಸಂಖ್ಯಾತರಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಿದರು. ಸಂಸ್ಥೆಯ ಅಧ್ಯಕ್ಷೆ ದೀಪಾ ಬುದ್ಧೆ, ದೊಡ್ಡಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ಶೃತಿ ಇತರರು ಇದ್ದರು.
ಚಾಮರಾಜನಗರದ ಸಮತಾ ಸೊಸೈಟಿ ಸಂಸ್ಥೆಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಲಿಂಗತ್ವ ಅಲ್ಪಸಂಖ್ಯಾತರಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಿದರು. ಸಂಸ್ಥೆಯ ಅಧ್ಯಕ್ಷೆ ದೀಪಾ ಬುದ್ಧೆ, ದೊಡ್ಡಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ಶೃತಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸ್‌ಐಆರ್ ವಿಶೇಷ ಸಮಗ್ರ ಪರಿಷ್ಕರಣೆ ಅರಿವು ಮೂಡಿಸಿದ ಡಿಸಿ ಶ್ರೀರೂಪಾ
  • ಯುವ ಮತದಾರರಿಗೆ ನಮೂನೆ-6 ಭರ್ತಿ
ಚಾಮರಾಜನಗರ: ವಿಶೇಷ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ನಗರದ ಗಾಳಿಪುರ ವಾರ್ಡ್‌ಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಯುವ ಮತದಾರರ ಪರಿಶೀಲನೆ ನಡೆಸಿ ಜಾಗೃತಿ ಮೂಡಿಸಿದರು.
ಬಳಿಕ ಸಮತಾ ಸೊಸೈಟಿಗೆ ಭೇಟಿ ನೀಡಿ, ಲಿಂಗತ್ವ ಅಲ್ಪಸಂಖ್ಯಾತರ ತೃತೀಯ ಲಿಂಗದ ಮತದಾರರಿಗೆ ಗಣತಿ ನಮೂನೆ ಭರ್ತಿ ಮಾಡುವ ಕುರಿತು ಅರಿವು ಮೂಡಿಸಿ, ಎಲ್ಲರೂ ಕಡ್ಡಾಯವಾಗಿ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಯಿತು.
ನಂತರ ದೀನಬಂಧು ಟ್ರಸ್ಟ್‌ಗೆ ಭೇಟಿ ನೀಡಿ, ಯುವ ಮತದಾರರಿಗೆ ನಮೂನೆ-6 ಭರ್ತಿ ಮಾಡುವ ಕುರಿತು ಮಾಹಿತಿ ನೀಡಲಾಯಿತು.
ಈ ವೇಳೆ ದೀನಬಂಧು ಸಂಸ್ಥೆಯ ಕಾರ್ಯದರ್ಶಿ ಜಯದೇವ್ ಅವರು ತಮ್ಮ ಗಣತಿ ನಮೂನೆಯನ್ನು ಸ್ಥಳದಲ್ಲಿಯೇ ಭರ್ತಿ ಮಾಡಿ ಅಧಿಕಾರಿಗಳಿಗೆ ಸಲ್ಲಿಸಿದರು. ತೆಗೆ, ಟ್ರಸ್ಟ್‌ನಲ್ಲಿದ್ದ ಇತರೆ ಅರ್ಹ ಯುವ ಮತದಾರರು ಸಹ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಹಾಗೂ ನಮೂನೆ-6 ಭರ್ತಿ ಮಾಡುವಂತೆ ತಿಳಿಸಲಾಯಿತು.
ಇದೇ ವೇಳೆ ಹರದನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಸ್ವೀಪ್‌ವತಿಯಿಂದ ಆಯೋಜಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಅಲ್ಲದೆ, ಹಿರಿಯ ಮತದಾರರನ್ನು ಭೇಟಿ ಮಾಡಿ ಅವರೊಂದಿಗೆ ಸಂವಾದ ನಡೆಸಿ, ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net