ಕೇರಳ ಗಡಿ ಪರಿಶೀಲಿಸಿದ ಎಸ್ಪಿ ಮುತ್ತುರಾಜ್

ಗುಂಡ್ಲುಪೇಟೆ ಕೇರಳ ರಸ್ತೆಯ ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಮುತ್ತುರಾಜ್ ಭೇಟಿ ನೀಡಿ ವಾಹನಗಳ ತಪಾಸಣೆ ವೀಕ್ಷಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಜಯಕುಮಾರ್ ಇತರರು ಇದ್ದರು.
ಗುಂಡ್ಲುಪೇಟೆ ಕೇರಳ ರಸ್ತೆಯ ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಮುತ್ತುರಾಜ್ ಭೇಟಿ ನೀಡಿ ವಾಹನಗಳ ತಪಾಸಣೆ ವೀಕ್ಷಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಜಯಕುಮಾರ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • SP Muthuraj
ಗುಂಡ್ಲುಪೇಟೆ: ತಾಲೂಕಿನ ಕೇರಳದ ರಸ್ತೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.
ಇತ್ತೀಚೆಗೆ ಸುಲ್ತಾನ್ ಬತ್ತೇರಿ ರಸ್ತೆಯಲ್ಲಿ ದುಷ್ಕರ್ಮಿಗಳು ಕಾರುಗಳನ್ನು ಅಡ್ಡಗಟ್ಟಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಲಕ್ಷಾಂತರ ರೂಪಾಯಿಗಳನ್ನು ದರೊಡೆ ಮಾಡಿರುವ ಘಟನೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದರು.
ಮದ್ದೂರು ಹಾಗೂ ಮೂಲೆಹೊಳೆ ಚೆಕ್‌ಪೋಸ್ಟ್‌ಗಳಲ್ಲಿ ಅನುಮಾನಾಸ್ಪದ ವಾಹನಗಳ ತಪಾಸಣೆ ಕೈಗೊಳ್ಳುವಂತೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿಗೆ ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net