ನಂಜುಂಡಯ್ಯರಿಗೆ ಎಸ್‌ಪಿಬಿ ಸೇವಾ ಪ್ರಶಸ್ತಿ ಪ್ರಧಾನ

ಚಾಮರಾಜನಗರದ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಶುಕ್ರವಾರ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯಳಂದೂರಿನ ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಆರ್.ನಂಜುಂಡಯ್ಯ ಅವರಿಗೆ ಎಸ್‌ಪಿಬಿ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಎಚ್.ಎಂ.ಶಿವಣ್ಣ, ನರಸಿಂಹಮೂರ್ತಿ, ಮಲೆ ನಟರಾಜು, ಶ್ರೀನಿಧಿ ಕುದರ್ ಇತರರಿದ್ದರು.

Published on
ಯಳಂದೂರು: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಆರ್.ನಂಜುಂಡಯ್ಯ ಅವರಿಗೆ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಕೊಡುವ ಎಸ್‌ಪಿಬಿ ಸೇವಾ ಪ್ರಶಸ್ತಿಯನ್ನು ಶುಕ್ರವಾರ ನೀಡಲಾಯಿತು.
ಚಾಮರಾಜನಗರ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ 80ನೇ ಹುಟ್ಟುಹಬ್ಬದ ನಿಮಿತ್ತ ಆಯೋಜಿಸಿದ್ದ ನಮ್ಮ ಚೆಲುವ ಚಾಮರಾಜನಗರ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಆರ್.ನಂಜುಂಡಯ್ಯ ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ನೀಡಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ನಂಜುಂಡಯ್ಯ ಅವರು, ನನ್ನ ಸೇವೆಯನ್ನು ಗುರುತಿಸಿ ನನಗೆ ಈ ಪ್ರಶಸ್ತಿಯನ್ನು ನೀಡಿರುವುದು ಅತೀವ ಸಂತಸ ತಂದಿದೆ. ಇದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ನಾನು ಇನ್ನಷ್ಟು ಸೇವೆ ಮಾಡಲು ಇದು ಪ್ರೇರಣೆ ನೀಡಿದೆ. ಬಡ ಮಕ್ಕಳ ಶಿಕ್ಷಣಕ್ಕೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಾಮಾಣಿಕವಾಗಿ ನಾನು ಇನ್ನಷ್ಟು ಸೇವೆ ನೀಡಲು ಪ್ರಯತ್ನಪಡುತ್ತೇನೆ ಎಂದರು.
ಕಲಾ ವೇದಿಕೆಯ ಅಧ್ಯಕ್ಷ ಎಚ್.ಎಂ.ಶಿವಣ್ಣ, ಜಾನಪದ ಕಲಾವಿದ ನರಸಿಂಹಮೂರ್ತಿ, ಮಲೆ ನಟರಾಜು, ಶ್ರೀನಿಧಿ ಕುದುರ್ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net