ತಾಲೂಕಿನಲ್ಲೇ ಶಿವನ ದೇಗುಲ ಇದಾಗಿದ್ದು, ಲಿಂಗಮೂರ್ತಿಯನ್ನು ಒಳಗೊಂಡಿದೆ. ಇಲ್ಲಿ ಅಮಾವಾಸ್ಯೆ, ಹುಣ್ಣಿಮೆ, ಹಬ್ಬ, ಹರಿದಿನ, ಸೋಮವಾರ, ಶುಕ್ರವಾರ ಹಾಗೂ ಇನ್ನಿತರ ವಿಶೇಷ ದಿನಗಳಂದು ಪೂಜೆ, ಪುನಸ್ಕಾರಗಳು ಜರುಗುತ್ತವೆ. ಭಾನುವಾರ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ದೇಗುಲವನ್ನು ತಳಿರು, ತೋರಣ, ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ ಶಿವನ ಸ್ವರೂಪಿ ಲಿಂಗಮೂರ್ತಿಗೆ ರುದ್ರಾಭಿಷೇಕ ಹಾಗೂ ಬಿಲ್ವಾರ್ಚನೆಯನ್ನು ನೆರವೇರಿಸಿ ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು.