ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಶುಕ್ರವಾರ ದೇವರ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿರುವುದು.
Published on:
Copied
Follow Us
ಯಳಂದೂರು:ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಗುರುವಾರ ಬ್ರಹ್ಮ ರಥೋತ್ಸವ ಸಂಪನ್ನಗೊಂಡ ನಂತರದ ಮಾರನೇ ದಿನವಾದ ಶುಕ್ರವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿತು.
ಬೆಳಗ್ಗೆ 11 ಗಂಟೆಯಿಂದ ಹಗಲು ರಡೋತ್ಸವ, ಸಂಜೆ ರಾಸ ಕ್ರೀಡೋತ್ಸವ, ಪ್ರಹ್ಲಾದೋತ್ಸವ, ಶಾಂತ್ಯೋತ್ಸವ ಹಾಗೂ ಶಯನೋತ್ಸವ ಸೇವೆ ಸಂಪನ್ನಗೊಂಡಿತು. ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಏರಿಕೆಯಾಗಿತ್ತು. ಕೆಎಸ್‌ಆರ್‌ಟಿಸಿ ವತಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು.
ದೊಡ್ಡ ಜಾತ್ರೆ ಹಿನ್ನೆಲೆಯಲ್ಲಿ 15 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ವಸಂತೋತ್ಸವ ಹಾಗೂ ತೆಪ್ಪೋತ್ಸವ ನಡೆಯಲಿದೆ. ಮೇ 23ರಂದು ಚಾಲನೆ ಸಿಗಲಿದ್ದು ಜೂ.7 ರವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶನಿವಾರ ಮತ್ತು ಭಾನುವಾರ ಭಕ್ತರ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ. ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಎಲ್ಲ ರೀತಿಯಲ್ಲೂ ಅನುಕೂಲ ಮಾಡಲಾಗಿದೆ. ಅಲ್ಲದೆ ದಾಸೋಹದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಸುರೇಶ್ ಮಾಹಿತಿ ನೀಡಿದರು.