ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ

ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಸ್. ಕವಿತಾ, ಎಸ್.ಗುರುರಾಜು, ದಿಲೀಪ್ ಕುಮಾರ್, ರಾಜೇಶ್ ಇತರರಿದ್ದರು.
ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಸ್. ಕವಿತಾ, ಎಸ್.ಗುರುರಾಜು, ದಿಲೀಪ್ ಕುಮಾರ್, ರಾಜೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಂಶುಪಾಲೆ ಎಸ್.ಕವಿತಾ ಅಭಿಪ್ರಾಯ
  • ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಗುಂಡ್ಲುಪೇಟೆ: ಕ್ರೀಡೆ ದೈಹಿಕ ಆರೋಗ್ಯವನ್ನು ಕಾಪಾಡುವ ಜತೆಗೆ ಮಾನಸಿಕ ಸದೃಢತೆ ಹೆಚ್ಚಿಸುತ್ತದೆ ಎಂದು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಪ್ರಾಂಶುಪಾಲೆ ಎಸ್.ಕವಿತಾ ಹೇಳಿದರು.
ತಾಲೂಕಿನ ಬೇಗೂರು ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಚಾಮರಾಜನಗರದ ಮೈ ಭಾರತ ಕೇಂದ್ರ ಹಾಗೂ ರಂಗ ಸೌರಭ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆಗೆ ಮಹತ್ವದ ಪಾತ್ರವಿದ್ದು, ವಿದ್ಯಾರ್ಥಿನಿಯರು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಉತ್ತಮ ಭವಿಷ್ಯವನ್ನು ಯುವ ಜನರು ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜಶೇಖರಪ್ಪ, ದಿಲೀಪ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿಸಲಾಯಿತು.
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸನಾಯ್ಕ, ಪುಷ್ಪಾ ಬೆಂಡರವಾಡಿ, ರಂಗಸೌರಭ ಸಂಸ್ಥೆ ಕಾರ್ಯದರ್ಶಿ ಗುರುರಾಜು, ವಸತಿ ಶಾಲೆ ನಿಲಯಪಾಲಕ ಮಂಜುನಾಥ, ಸಿಬ್ಬಂದಿ ಮಹೇಶ್, ರವಿರಾಜು ನಾಗಯ್ಯ ಜ್ಯೋತೆಪ್ಪನವರ್, ರಾಜೇಶ್, ನಸಿರ್ಂಗ್ ಆಫೀಸರ್ ಸೌಮ್ಯಾ, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net