ಗುಂಡ್ಲುಪೇಟೆ ತಾಲೂಕಿನ ಚಿಕ್ಕತುಪ್ಪೂರು ಗ್ರಾಮದಲ್ಲಿ ಯೋಗೇಶ್ವರಿ ಅಮ್ಮನವರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
Published on:
Copied
Follow Us
ಗುಂಡ್ಲುಪೇಟೆ:ತಾಲೂಕಿನ ಚಿಕ್ಕತುಪ್ಪೂರು ಗ್ರಾಮದಲ್ಲಿ ಶ್ರೀ ಯೋಗೇಶ್ವರಿ ಅಮ್ಮನವರ
ಜಾತ್ರೆ ಮತ್ತು ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಗ್ರಾಮದ ಎಲ್ಲ ಸಮುದಾಯದವರು ಒಟ್ಟಾಗಿ ಸೇರಿ ಆಚರಿಸುವ ಹಿನ್ನೆಲೆಯಲ್ಲಿ ಗ್ರಾಮದ ಹೊರ ವಲಯದಲ್ಲಿರುವ ಶ್ರೀ ಯೋಗೇಶ್ವರಿ ದೇವಾಲಯಕ್ಕೆ ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಶುಕ್ರವಾರ ಬೆಳಗ್ಗೆ ಗ್ರಾಮದ ಮಂಟೇಸ್ವಾಮಿ ದೇವಾಲಯದ ಬಳಿ ಧ್ವಜ ಪತಾಕೆಗಳಿಂದ ಅಲಂಕೃತಗೊಂಡಿದ್ದ ರಥವನ್ನು ಮಂಗಳವಾದ್ಯ, ವೀರಭದ್ರಕುಣಿತ, ಕಂಸಾಳೆ, ಡೊಳ್ಳು, ನಗಾರಿ, ಗೊರವರ ಕುಣಿತ ಮುಂತಾದ ಜನಪದ ಕಲಾತಂಡಗಳೊಂದಿಗೆ ದೇವಾಲಯದ ಬಳಿಗೆ ಎಳೆದೊಯ್ಯಲಾಯಿತು.
ಗ್ರಾಮದ ಹಾಗೂ ಬೇರೆ ಬೇರೆ ಊರುಗಳಿಂದ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಾಲಯ ಮತ್ತು ರಥಕ್ಕೆ ಪೂಜೆ ಸಲ್ಲಿಸಿದರು. ನಂತರ ಪ್ರಸಾದ ವಿನಿಯೋಗ ನೆರವೇರಿಸಲಾಯಿತು.